ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕೊಡಗು ಮಡಿಕೇರಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಮಳೆಯ ಆರ್ಭಟಕ್ಕೆ ಅನೇಕ ಭಾಗಗಳಲ್ಲಿ ಮರಗಳು ಧರೆ ಗುರುಳುತ್ತಿದೆ, ಕೊಡಗಿನ ಸಿದ್ದಾಪುರ ಭಾಗದಲ್ಲಿ ಆನೆಗಳ ಹಾವಳಿ ಹೆಚ್ಚುತ್ತಲೇ ಇದೆ. 

ಒಂದೆಡೆ ಭೀಕರ ಮಳೆ, ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವುದು ಮುಖ್ಯ ಸಮಸ್ಯೆಯಾಗಿ ಕೊಡಗಿನ ಜನರಿಗೆ ಕಾಡುತ್ತಿದ್ದರೆ ಇನ್ನೊಂದೆಡೆ ಕೊಡಗಿನ ಸಿದ್ಧಾಪುರ ಬಳಿಯ ಅಮ್ಮತ್ತಿ, ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ ಮಿತಿ ಮೀರಿದೆ. 

ಇದನ್ನೂ ಓದಿ : ಕೊಚ್ಚಿ ಹೋಗಿ ನಾಲ್ಕು ದಿನ ಕಳೆದರೂ ಪತ್ತೆಯಾಗದ ಬಾಲಕಿ ಗುರುತು


ಈ ಭಾಗದ ರೈತರ ಕಾಫಿ, ಬಾಳೆಗಿಡ, ಭತ್ತದ ಪೈರನ್ನು ಆನೆಗಳು ನಾಶ ಪಡಿಸುತ್ತಿದೆ. ಮಳೆಗಾಲದ ಆರಂಭದ ಸಮಯವಾದ ಈ ಸಂದರ್ಭದಲ್ಲಿ ಜನರು ಕೃಷಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುತ್ತಾರೆ. ಆದರೆ ಎಗ್ಗಿಲ್ಲದೆ ನಡೆಯುತ್ತಿರುವ ಆನೆ ದಾಳಿಯಿಂದಾಗಿ ಜನರು ತಮ್ಮ ಜೀವನಾಧಾರವಾದ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುವಂತ ಸ್ಥಿತಿ ನಿರ್ಮಾಣವಾಗಿದೆ. 

ಅರಣ್ಯ ಇಲಾಖೆಯಿಂದ ಯಾವುದೇ ಪ್ರಯೋಜನಗಳಾಗುತ್ತಿಲ್ಲ ; ಸಾರ್ವಜನಿಕರ ಆರೋಪ 

ಆನೆ ದಾಳಿ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಕೆ ನಡೆಸುತ್ತಿದ್ದರೂ ಕೂಡ ಯಾವುದೇ ಪ್ರಯೋಜನಗಳಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಲಾಖೆಯ ಅಧಿಕಾರಿಗಳು ನಿಗಾವಹಿಸಿ ಆನೆ ದಾಳಿಗೆ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ರಘುವೀರ್ ಭಟ್ ನಿಧನ : 

ತೀರ್ಥಹಳ್ಳಿ : ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾದ ರಘುವೀರ್ ಭಟ್ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ರಥಬೀದಿಯ ನಿವಾಸದಲ್ಲಿ ಇಂದು ರಘುವೀರ್ ಭಟ್ (90) ಅವರು ನಿಧನರಾಗಿದ್ದು ಮೃತರ ಅಗಲುವಿಕೆಯ ಕುರಿತು ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. 


ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6

 ಮೃತ ರಘುವೀರ್ ಭಟ್ ಅವರು 1947 ರಲ್ಲಿ ನಡೆದ ಭಾರತದ ಮೊಟ್ಟ ಮೊದಲ ಸ್ವಾತಂತ್ರೋತ್ಸವದಲ್ಲಿ ಭಾಗಿಯಾಗಿದ್ದರು, ಸಮಾಜಕ್ಕಾಗಿ ಅನೇಕ ಕಾರ್ಯಗಳಲ್ಲಿ ಭಾಗಿಯಾಗಿದ್ದ ಅವರು ಭಾರತೀಯ ಜನತಾ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತೀರ್ಥಹಳ್ಳಿ ಭಾಗದ ಹಿರಿಯ ಬಿಜೆಪಿ ಮುಖಂಡರಾಗಿದ್ದರು. ಇಂದು ಸಂಜೆ ತೀರ್ಥಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. 

ರಾಜ್ಯದ ಗೃಹ ಸಚಿವರಾದ ಆರಗಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಮೃತರ ಸಾವಿನ ಕುರಿತು ಸಂತಾಪ ಸೂಚಿಸಿದ್ದಾರೆ. ಅಂತಿಮ ದರ್ಶನವನ್ನು ಪಡೆದುಕೊಳ್ಳುವ ಸಲುವಾಗಿ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಆತ್ಮೀಯರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.