ಹಾಸನ : (ನ್ಯೂಸ್ ಮಲ್ನಾಡ್ ವರದಿ) ಶಾಲಾ ಮಕ್ಕಳಿದ್ದ ಬಸ್ವೊಂದು ರಸ್ತೆ ಬದಿಗೆ ಉರುಳಿ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ದೇವಗೌಡನಹಳ್ಳಿಯ ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಬಸ್ ಇಂದು ಬೆಳಗ್ಗೆ ಉರುಳಿಬಿದ್ದಿದ್ದು, ಬಸ್ಸಿನಲ್ಲಿದ್ದ 25 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಕಳಪೆ ರಸ್ತೆ ಕಾಮಗಾರಿಯಿಂದ ರಸ್ತೆ ಬದಿಯ ಮಣ್ಣು ಕುಸಿದು ಶಾಲಾ ಬಸ್ ಉರುಳಿ ಬಿದ್ದಿದೆ ಎಂಬ ಆರೋಪ ಕೇಳಿಬಂದಿದೆ.
ಅದೃಷ್ಟವಶಾತ್ ಎಂಬಂತೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಬಸ್ಸಿನಲ್ಲಿದ್ದ 25 ಜನ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸ ರಸ್ತೆ ನಿರ್ಮಾಣದ ವೇಳೆ ರಸ್ತೆಯ ಎರಡೂ ಬದಿಯಲ್ಲಿ ಸೂಕ್ತ ರೀತಿಯಲ್ಲಿ ಸಮತಟ್ಟು ಮಾಡದೇ ಅನಾಹುತಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅತೀ ಶೀಘ್ರವಾಗಿ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಗಮನಹರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಹಾಗೂ ರಸ್ತೆ ದುರಸ್ತಿ ಮಾಡಬೇಕೆಂದು ಸ್ಥಳೀಯರು ಕೋರಿದ್ದಾರೆ. ಈ ಮಾರ್ಗದಲ್ಲಿ ಅನೇಕರು ಸಂಚಾರ ನಡೆಸುವುದರಿಂದ ಸೂಕ್ತವಾದ ಕ್ರಮಗಳನ್ನು ತ್ವರಿತಗತಿಯಲ್ಲಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು : ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿ ಹೊತ್ತೊಯ್ದ ಖದೀಮರು
ಖದೀಮರು ದೇವಸ್ಥಾನದ ಬೀಗ ಓಡೆದು ಕಾಣಿಕೆ ಹುಂಡಿ ಹಾಗೂ ಹುಂಡಿಯಲ್ಲಿದ್ದ ಹಣವನ್ನು ದೋಚಿರುವ ಘಟನೆಯು ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಶ್ರೀ ಸುಗ್ಗಿಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ಸಂಭವಿಸಿದ್ದು, ದೇವಾಲಯದ ಮುಂಬಾಗಿಲಿನ ಬೀಗ ಮುರಿದು ಕಳ್ಳರು ಹಣವನ್ನು ದೋಚಿದ್ದಾರೆ. ಕಳ್ಳತನ ನಡೆದಿರುವ ಕುರಿತಾಗಿ ದೇವಸ್ಥಾನದ ಪಕ್ಕದ ಮನೆಯವರು ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಈ ಕುರಿತು ನೋಡಿದಾಗ ಕಳ್ಳರು ಕಾಣಿಕೆ ಹುಂಡಿಯನ್ನು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಕಾಣಿಕೆ ಹುಂಡಿಯಲ್ಲಿ ಅಂದಾಜು 20 ರಿಂದ 25 ಸಾವಿರ ರೂಪಾಯಿ ಹಣವಿದ್ದು, ಈ ಕೃತ್ಯವನ್ನು ಎಸಗಿರುವ ಕಳ್ಳರನ್ನು ಅತೀ ಶೀಘ್ರವಾಗಿ ಬಂಧಿಸಿ ಹಣವನ್ನು ಪತ್ತೆ ಮಾಡಿಕೊಡಬೇಕಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ




.jpeg)

0 Comments