ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಸಾಲಗಾರರ ಕಿರುಕುಳ ಹಾಗೂ ವ್ಯವಹಾರದಲ್ಲಿ ನಷ್ಟವಾಗಿದೆ ಎಂದು ಉದ್ಯಮಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ : ಕೊಪ್ಪ : ಭಾರೀ ಮಳೆಗೆ ರಸ್ತೆ ಕುಸಿತ
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಮಾಗುಂಡಿ ಗ್ರಾಮದ 37 ವರ್ಷ ಪ್ರಾಯದ ಎಂ.ಡಿ ಪ್ರಕಾಶ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಬಾಳೆಹೊನ್ನೂರಿನಲ್ಲಿ ಕೃಷಿ ಸಂಬಂಧಿತ ಉಪಕರಣಗಳನ್ನು ಮಾರಾಟ ಹಾಗೂ ಸರ್ವೀಸ್ ಒದಗಿಸುತ್ತಿದ್ದ ಅವರು ವ್ಯಾಪಾರದಲ್ಲಿ ನಷ್ಟಹೊಂದಿ ಹಾಗೂ ಪಡೆದ ಸಾಲವನ್ನು ಸೂಕ್ತ ಸಮಯದಲ್ಲಿ ಹಿಂದಿರುಗಿಸಲಾರದ ಕಾರಣಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತ ಪ್ರಕಾಶ್ ಅವರು ಮನೆಯ ಸಮೀಪದ ಗೋದಾಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತಪಟ್ಟಿರುವ ಸ್ಥಳದಲ್ಲೇ ಡೆತ್ ನೋಟ್ ಪತ್ತೆಯಾಗಿದೆ.
ಈ ಸಂಬಂಧ ಸೂಕ್ತ ತನಿಖೆ ನಡೆಸಿ ಪತಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಮೃತ ವ್ಯಕ್ತಿಯ ಪತ್ನಿ ಪೊಲೀಸರನ್ನು ಕೋರಿದ್ದಾರೆ ಹಾಗೂ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ಶೃಂಗೇರಿ : ಹಿಂದೂ ಸೇವಾ ಪ್ರತಿಷ್ಠಾನದ ವತಿಯಿಂದ ಉಚಿತ ಹೊಲಿಗೆ ತರಬೇತಿ ಕಾರ್ಯಾಗಾರ ಉದ್ಘಾಟನೆ
ಹಿಂದೂ ಸೇವಾ ಪ್ರತಿಷ್ಠಾನ ಶೃಂಗೇರಿ ಇವರ ವತಿಯಿಂದ ಶೃಂಗೇರಿಯ ಬೇಗಾರ್ ನಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಗಾರ ಉದ್ಘಾಟನೆಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಕೈಮರ ವ್ಯಾಪ್ತಿಯ ಗ್ರಾಮಸ್ಥರಿಗೆ ಉದ್ಯೋಗ ದೃಷ್ಟಿಯಿಂದ ಅನುಕೂಲಕರವಾಗುವಂತೆ, ಹಾಗೂ ಸ್ವಾವಲಂಬನೆಯುತ ಜೀವನ ನಡೆಸುವ ನಿಟ್ಟಿನಲ್ಲಿ ಶ್ರೀ ಶ್ರೀ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ, ಶೃಂಗೇರಿ ಪ್ರೇರಿತ ಹಿಂದೂ ಸೇವಾ ಪ್ರತಿಷ್ಠಾನ ಕರ್ನಾಟಕ ಸಂಚಾಲಿತ ಇವರ ವತಿಯಿಂದ ಉಚಿತ ಹೊಲಿಗೆ ತರಬೇತಿ ಕಾರ್ಯಗಾರವು ಉದ್ಘಾಟನೆಗೊಂಡಿತು. ಈ ಕಾರ್ಯಗಾರವನ್ನು ಹಿಂದೂ ಸೇವಾ ಪ್ರತಿಷ್ಠಾನದ ರಾಜ್ಯ ನಿರ್ದೇಶಕರಾದ ಶ್ರೀ ಸುರೇಶ್ ಜಿ ಇವರು ಉದ್ಘಾಟಿಸಿದರು.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಈ ಕುರಿತು ಮಾತನಾಡಿದ ಅವರು ಕಳೆದ ಅನೇಕ ವರ್ಷಗಳಿಂದ ನಿರಂತರವಾಗಿ ಹಿಂದೂ ಸೇವಾ ಪ್ರತಿಷ್ಠಾನವು ಕಾರ್ಯನಿರ್ವಹಿಸುತ್ತಾ ಸಾಗಿದೆ, ಮಹಿಳಾ ಸ್ವಾವಲಂಬನೆ ಹಾಗೂ ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕಾಗಿ ಪ್ರತಿಷ್ಠಾನವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಹಿಂದೂ ಸೇವಾ ಪ್ರತಿಷ್ಠಾನದ ರಾಜ್ಯ ಸಂಯೋಜಕರಾದ ನಟರಾಜ ರಾನಡೆ, ತಾಲೂಕು ಸಂಯೋಜಕರಾದ ನೂತನ್ ಸೂರ್ಯ, ಕಿರಣ್ ಹುಕ್ಳಿ, ಉಮೇಶ್ ಮೀಗಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


.jpeg)



0 Comments