ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ತಾಯಿ ಹಾಗೂ ಮಗ ಇಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ವೀಡಿಯೋ ನೋಡಿ :  ಶೃಂಗೇರಿ ಸಮೀಪ ಭೀಕರ ರಸ್ತೆ ಅಪಘಾತ; ಓರ್ವ ವ್ಯಕ್ತಿಯ ದುರ್ಮರಣ, ಇನ್ನೋರ್ವರ ಸ್ಥಿತಿ ಗಂಭೀರ

ವರದಕ್ಷಿಣೆ ಕಿರುಕುಳ ತಾಳಲಾರದೇ ಮಗನ ಜೊತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದ ನಯನಾ(27) ಮತ್ತು ಆಕೆಯ ಪುತ್ರ ಗುರು(4) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮೃತ ದುರ್ದೈವಿಗಳು. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : 

https://forms.gle/APPtk8M3ZDk2oMka6


ಈ ಜೋಡಿಯು ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದ್ದು ಮೃತಳ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿ ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು.

ಘಟನಾ ಸಂಬಂಧ ಪೊಲೀಸರು ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಸೊರಬ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಸೊರಬ ಪೊಲೀಸರು ಪತಿ ಶರತ್ ನನ್ನು ಬಂಧಿಸಿದ್ದು ಹೆಚ್ಚಿನ ವಿಚಾರಣೆ ಆರಂಭಿಸಿದ್ದಾರೆ. 

ಮೃತರನ್ನು ಕಳೆದುಕೊಂಡಿರುವ ಸಂಬಂಧಿಕರು ಹಾಗೂ ಪರಿಚಯಸ್ಥರು ಅತೀವವಾದ ನೋವನ್ನು ವ್ಯಕ್ತಪಡಿಸಿದ್ದು ಈ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.