ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಭಾರತದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರ ಕುರಿತಾಗಿ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಶೃಂಗೇರಿ : ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದ ಮನೆ ಕುಸಿಯುವ ಭೀತಿ
ದೇಶದ ಮಾಜಿ ಪ್ರಧಾನಿ, ಹಿರಿಯ ರಾಜಕೀಯ ಮುತ್ಸದ್ಧಿಯಾದ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡ ಅವರ ಕುರಿತು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ಅವರು ನಾಲಿಗೆ ಹರಿಬಿಟ್ಟು ಅವರ ಸಂಸ್ಕೃತಿಯನ್ನು ಬಿಂಬಿಸಿದ್ದಾರೆ. ಹಿರಿಯ ಮುತ್ಸದ್ದಿ ದೇವೇಗೌಡ ಅವರ ಕುರಿತಾಗಿ ಈ ರೀತಿಯ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವಂಥದ್ದಲ್ಲ, ಅವರು ಅರಳು ಮರಳಿಗೆ ತುತ್ತಾದಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಾತಿ ಬೇಧವನ್ನು ಮರೆತು, ಪಕ್ಷಗಳ ಅಂತರವನ್ನೂ ಮೀರಿ, ಭಾರತದ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಅನೇಕ ಗಣ್ಯರು ಗೌರವಿಸುವ ವ್ಯಕ್ತಿಯನ್ನು ಸ್ವತಃ ಕರ್ನಾಟಕದವರೇ ಆದ ರಾಜಣ್ಣನವರು ಇಂತಹ ಶ್ರೇಷ್ಠ ವ್ಯಕ್ತಿಯನ್ನು ಕಡೆಗಾಣಿಸಿ ಅವರ ಕುರಿತಾಗಿ ಟೀಕೆ ಮಾಡಿ ಮಾತನಾಡಿರುವುದು ಖಂಡನಾರ್ಹ ಎಂದರು.
ರಾಜಣ್ಣನವರ ಶೈಲಿಯಲ್ಲಿಯೇ ಅವರಿಗೆ ನಾವು ತಿರುಗೇಟು ನೀಡಬಹುದು ಆದರೆ ಅದರಿಂದಾಗಿ ನಮಗೂ ಅವರಿಗೂ ಯಾವುದೇ ವ್ಯತ್ಯಾಸಗಳಿರುವುದು ಕಂಡು ಬರುವುದಿಲ್ಲ ಅಂತೆಯೇ ಕಾಂಗ್ರೆಸ್ ಪಕ್ಷವು ತನ್ನ ಘನತೆಯನ್ನು ಉಳಿಸಿಕೊಳ್ಳುವ ಸಲುವಾಗಿ ಇಂತಹ ಕೀಳು ಮನಸ್ಥಿತಿ ಹೊಂದಿರುವ ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ರಾಜಕೀಯ ನಿವೃತ್ತಿ ಪಡೆಯುವಂತೆ ಆದೇಶಿಸಬೇಕೆಂದು ಆಗ್ರಹಿಸಿದ್ದಾರೆ.
ಶೃಂಗೇರಿ : ಶೃಂಗೇರಿ ಪಟ್ಟಣದಲ್ಲಿರುವ ಶೃಂಗೇರಿ ತಾಲೂಕು ಆಸ್ಪತ್ರೆಗೆ ಸೇರಿದ ಜಾಗವನ್ನು ಸೂಕ್ತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು, ಆ ಜಾಗವನ್ನು ಯಾರಿಗೂ ಹಸ್ತಾಂತರ ಮಾಡಬಾರದೆಂದು ತಾಲೂಕು ಆಡಳಿತ ವೈದ್ಯಾಧಿಕಾರಿಗಳನ್ನು ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ಹಾಗೂ ಸಾರ್ವಜನಿಕರು ಕೋರಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದ ಜಾಗವು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿದ್ದು ಅದು ಯಾವುದೇ ರೀತಿಯ ಬಳಕೆಗೆ ಒಳಪಟ್ಟಿರುವುದಿಲ್ಲ, ಪ್ರಸ್ತುತ ತಾಲೂಕು ಆಸ್ಪತ್ರೆ ಇರುವ ಕಟ್ಟಡದಲ್ಲಿಯೂ ಜಾಗದ ಕೊರತೆಯಿರುವ ಕಾರಣ ಚಿಕಿತ್ಸೆಗೆ ಬರುವ ರೋಗಿಗಳಿಗೆ ಸಾರ್ವಜನಿಕರಿಗೆ ಅನಾನುಕೂಲಗಳು ಉಂಟಾಗಿರುತ್ತದೆ ಈ ನಿಟ್ಟಿನಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಸಹಾಯವಾಗುವಂತೆ ಆ ಜಾಗದಲ್ಲಿ ಆಯುಷ್ ಚಿಕಿತ್ಸಾಲಯ, ಪ್ರಕೃತಿ ಚಿಕಿತ್ಸಾ ಕೇಂದ್ರ ಅಥವಾ ಹೆರಿಗೆ ಆಸ್ಪತ್ರೆ ಇವುಗಳಲ್ಲಿ ಯಾವುದಾದರೊಂದನ್ನು ಮಾಡಲು ಸೂಕ್ತವಾಗಿರುವ ಜಾಗವಾದ ಕಾರಣ ಸಾರ್ವಜನಿಕರಿಗೆ ಅನುಕೂಲಕರವಾಗುತ್ತದೆ ಹಾಗೂ ಈಗಿರುವ ಸ್ಥಳಾವಕಾಶದ ಕೊರತೆ ಸರಿದೂಗಲಿದೆ ಎಂದು ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ತಾಲೂಕು ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಆಸ್ಪತ್ರೆ ಜಾಗದ ಹಸ್ತಾಂತರಕ್ಕೆ ಸಾರ್ವಜನಿಕರ ವಿರೋಧವಿದೆ :
ಅಂತೆಯೇ ಶೃಂಗೇರಿ ಪಟ್ಟಣದಲ್ಲಿರುವ ಹಳೆಯ ಆಸ್ಪತ್ರೆಗೆ ಸಂಬಂಧಿಸಿದ ದಾಖಲೆಗಳು ಆಸ್ಪತ್ರೆ ಹೋರಾಟ ಸಮಿತಿಯ ಬಳಿಯಿದ್ದು, ಆ ಜಾಗವು ಆಸ್ಪತ್ರೆಯ ಹೆಸರಿನಲ್ಲೇ ಇದ್ದು ಪೂರಕವಾದ ದಾಖಲೆಗಳನ್ನು ಸಹ ಹೊಂದಿರುವ ಕಾರಣ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊರತು ಪಡಿಸಿ ಬೇರಾವುದೇ ವ್ಯಕ್ತಿ, ಸಂಸ್ಥೆ, ಅಥವಾ ಬೇರಾವುದೇ ಇಲಾಖೆಗೆ ಆಸ್ಪತ್ರೆ ಸುಪರ್ದಿಯಿಂದ ಹಸ್ತಾಂತರ ಮಾಡುವುದಕ್ಕೆ ಸಾರ್ವಜನಿಕರ ಹಾಗೂ ಆಸ್ಪತ್ರೆ ಹೋರಾಟ ಸಮಿತಿಯ ತಕರಾರಿದೆ ಎಂದು ತಿಳಿಸಿದೆ.
ಅಲ್ಲದೇ ಸಾರ್ವಜನಿಕರ ಆಸ್ತಿ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹಕ್ಕಾಗಿದ್ದು ಜಾಗದ ಹಸ್ತಾಂತರದ ಕುರಿತು ಯಾವುದೇ ಪ್ರಸ್ತಾವನೆ, ಅಥವಾ ಒತ್ತಡಗಳು ಬಂದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಉದ್ದೇಶದಿಂದ ಹೋರಾಟ ಸಮಿತಿಗೆ ತಿಳಿಸುವಂತೆ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತಾಲೂಕು ಆಡಳಿತ ವೈದ್ಯಾಧಿಕಾರಿಗಳಲ್ಲಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


.jpeg)




0 Comments