ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಟ್ಯಾಂಕರ್ ಸಿಲುಕಿಕೊಂಡ ಪರಿಣಾಮ ಕೆಲ ಗಂಟೆಗಳ ಕಾಲ ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಭಾರಿ ಸಂಖ್ಯೆಯಲ್ಲಿ ವಾಹನಗಳು ಸಾಗಾಟ ನಡೆಸುತ್ತದೆ, ಈ ಮಧ್ಯೆ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಟ್ಯಾಂಕರ್ ಒಂದು ಸಿಲುಕಿಕೊಂಡ ಪರಿಣಾಮ, ವಾಹನ ಸಂಚಾರಕ್ಕೆ ಕೆಲ ಗಂಟೆಗಳ ಕಾಲ ತಡೆ ಉಂಟಾಗಿತ್ತು. ಘಾಟ್ ನಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಹಿನ್ನೆಲೆ ಕೊಟ್ಟಿಗೆಹಾರದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. 


ರಾತ್ರಿ ಕೆಲ ಗಂಟೆಗಳ ಕಾಲ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು, ಬೆಳ್ತಂಗಡಿ ಪೊಲೀಸರು ವಾಹನವನ್ನು ಕ್ರೇನ್ ಮುಖಾಂತರ ಎತ್ತಿ ಇಂದು ಬೆಳಗ್ಗೆ 5.30 ರ ವೇಳೆಗೆ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಿ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿದರು. ಕೆಲವು ಗಂಟೆಗಳ ಕಾಲ ಪ್ರಯಾಣಿಕರು ಕೊಟ್ಟಿಗೆಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರದಾಡಿದರು.