ಚಿಕ್ಕಮಗಳೂರು / ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲವು ದಿನಗಳ ಹಿಂದೆ ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ರೌಡಿಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಎದುರು ಶರಣಾಗತಿ ಹೊಂದಿದ್ದಾರೆ.

ಶಿವಮೊಗ್ಗದ ನಡು ರಸ್ತೆಯಲ್ಲಿ ಹಾಡಹಗಲೇ ಹಂದಿ ಅಣ್ಣಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಜನ ಬೆಚ್ಚಿ ಬೀಳುವಂತೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಬಳಿಕದಲ್ಲಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದರು. ಈ ಮಧ್ಯೆ ನಿನ್ನೆ ತಡರಾತ್ರಿ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗತಿ ಹೊಂದಿದ್ದಾರೆ.


ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಅವರ ಕಛೇರಿಗೆ ಬಂದು ಕೊಲೆ ನಡೆಸಿರುವುದಾಗಿ ಒಪ್ಪಿಕೊಂಡಿರುವ ಆರೋಪಿಗಳು ಸದ್ಯ ಚಿಕ್ಕಮಗಳೂರು ಪೊಲೀಸರ ವಶದಲ್ಲಿದ್ದು ಈ ಕುರಿತಾಗಿ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬೀಳಲಿದೆ.