ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದವರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆಹಿಡಿದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಅರಿಶಿನಘಟ್ಟ ಗ್ರಾಮದಲ್ಲಿ ಅಕ್ರಮವಾಗಿ 11 ಮಂದಿ ಜೂಜಾಟದಲ್ಲಿ ತೊಡಗಿರುವುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು ಕೂಡಲೇ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳ ಬಳಿಯಿದ್ದ 37,130 ರೂಪಾಯಿ ನಗದನ್ನು ವಶಕ್ಕೆ ಪಡೆದಿರುವ ಪೊಲೀಸರು 3 ಮೋಟಾರ್ ಸೈಕಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯು ತರೀಕೆರೆ ಡಿವೈಎಸ್ಪಿ ಅವರ ನೇತೃತ್ವದಲ್ಲಿ ನಡೆದಿದ್ದು, ಪೊಲೀಸರ ತಂಡವು ಆರೋಪಿಗಳನ್ನು ಪತ್ತೆ ಮಾಡಿ ಆರೋಪಿಗಳ ಬಳಿಯಿದ್ದ ನಗದು ಹಾಗೂ ಮೋಟಾರ್ ಸೈಕಲ್ ನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಎಚ್ಚರಿಕೆ ನೀಡಿರುವ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.






0 Comments