ಬಾಳೆಹೊನ್ನೂರು: ಕಳೆದ 15 ದಿನದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾಫಿ ನಾಡು ಚಿಕ್ಕಮಗಳೂರು ತತ್ತರಿಸಿ ಹೋಗಿದೆ. ಎಲ್ಲಾ ನದಿಗಳು ಅಪಾಯದ ಮಟ್ಟ ತುಂಬಿ ಹರಿಯುತ್ತಿದ್ದು ಅಲ್ಲಲ್ಲಿ ಭೂ ಕುಸಿತದ ಪ್ರಕರಣಗಳು ಹೆಚ್ಚುತ್ತಿವೆ. ಹಾಗೆಯೇ ಇಂದು ಬಾಳೆಹೊನ್ನೂರ್ ಸಮೀಪದ ಖಾಂಡ್ಯ ಹೋಬಳಿ ವ್ಯಾಪ್ತಿಯ ಹುಯಿಗೆರೆ ಸಮೀಪದ ಮಣಬೂರು ಗ್ರಾಮದ ರೈತ ನರೇಂದ್ರ ಮತ್ತು ರವಿ ಗೌಡ ಎಂಬುವರ ಕಾಫೀ ತೋಟದಲ್ಲಿ ಭಾರಿ ಪ್ರಮಾಣದ ಭೂ ಕುಸಿತ ವಾಗಿದ್ದು ಇದರಿಂದ ಮಾಲೀಕರ ಕಾಫಿ ತೋಟಕ್ಕೆ ಅಪಾರ ಹಾನಿಯಾಗಿದೆ.
ಸ್ಥಳೀಯ ವ್ಯಕ್ತಿಗಳು ಭೂ ಕುಸಿತವಾಗುತ್ತಿರುವ ಸಂದರ್ಭದಲ್ಲಿ ಮೊಬೈಲ್ ಫೋನ್ ನಲ್ಲಿ ಚಿತ್ರೀಕರಣ ಮಾಡಿದ್ದು ಭೀಕರ ಭೂ ಕುಸಿತಕ್ಕೆ ಸಾಕ್ಷಿಯಾಗಿದೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಇತ್ತೀಚೆಗೆ ಮಲೆನಾಡಿನಲ್ಲಿ ಪರಿಸರ ಹಾನಿಯಿಂದಾಗಿ ದಟ್ಟ ಮಲೆನಾಡು ಪ್ರಕೃತಿ ವಿಕೋಪಗಳಿಂದ ತತ್ತರಿಸುತ್ತಿದೆ.. ಕಳೆದ ಮೂರು ವರ್ಷದಿಂದ ಮಳೆಗಾಲ ಸಂದರ್ಭದಲ್ಲಿ ಅತೀ ಹೆಚ್ಚಿನ ಪ್ರಕೃತಿ ವಿಕೋಪ ಗಳಿಗೆ ಮಲೆನಾಡು ಸಾಕ್ಷಿಯಾಗಿದೆ. ಸಂಬಂಧಿಸಿದ ಇಲಾಖೆ, ಹಾಗೂ ಸರ್ಕಾರ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆ ; ಮಲೆನಾಡು ಭಾಗದ ಶಾಲಾ ಕಾಲೇಜುಗಳಿಗೆ ಇನ್ನೆರಡು ದಿನ ರಜೆ ಮುಂದುವರಿಕೆ
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ನದಿ ಹಾಗೂ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಕೆಲ ಭಾಗಗಳಲ್ಲಿ ಮರಗಳು ರಸ್ತೆಗೆ ಉರುಳಿ ರಸ್ತೆ ಸಂಪರ್ಕಕ್ಕೆ ಅಡ್ಡಿ ಉಂಟುಪಡಿಸಿದ್ದರೆ ಇನ್ನೂ ಕೆಲವು ಭಾಗಗಳಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಜುಲೈ 06 ರಿಂದ 09 ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದ ಜಿಲ್ಲಾಡಳಿತ ಅದರ ಮುಂದುವರಿದ ಭಾಗವಾಗಿ ಮಳೆ ಇನ್ನೂ ಕ್ಷೀಣಿಸದ ಕಾರಣ ಮಲೆನಾಡು ಭಾಗದ ಶಾಲಾ-ಕಾಲೇಜುಗಳಿಗೆ ಇನ್ನೆರಡು ದಿನಗಳ ರಜೆಯನ್ನು ಘೋಷಣೆ ಮಾಡಿದೆ.
ಜುಲೈ 11 ರ ಸೋಮವಾರ ಹಾಗೂ 12 ಮಂಗಳವಾರ ಈ ಎರಡು ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕೊಪ್ಪ ನರಸಿಂಹರಾಜಪುರ ಮೂಡಿಗೆರೆ ಕಳಸ ಹಾಗೂ ಚಿಕ್ಕಮಗಳೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಸಲುವಾಗಿ ಚಿಕ್ಕಮಗಳೂರು ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಕೆ.ಎನ್ ರಮೇಶ್ ಅವರು ರಜೆ ಘೋಷಣೆ ಮಾಡಿದ್ದಾರೆ.
ಮಲೆನಾಡಿನ ಬಹುತೇಕ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಪ್ರವಾಹ ಭೀತಿ ಎದುರಾಗಿದೆ, ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ರಸ್ತೆಗಳಿಗೆ ಅಡ್ಡಲಾಗಿ ಮರಗಳುದುರಿದೆ. ಮಳೆಯಿಂದಾಗಿ ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸುತ್ತಿದ್ದು ಜನರು ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.


.jpeg)



0 Comments