ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗಾಂಜ ಮಾರಾಟ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ : 25 ಜನ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ

ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಚಿಕ್ಕಮಗಳೂರು ಪೊಲೀಸರು ಚಿಕ್ಕಮಗಳೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕಾರ್ಯಾಚರಣೆಯ ಮೂಲಕ ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಳಿ ಇದ್ದ 80 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಕಾಲದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :https://forms.gle/APPtk8M3ZDk2oMka6


ಈ ಕಾರ್ಯಾಚರಣೆಯನ್ನು CEN ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ನಡೆಸಿದ್ದು ಅಕ್ರಮವಾಗಿ ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡುಬಂದಲ್ಲಿ   ಯಾವುದೇ ಆತಂಕವಿಲ್ಲದೆ ಮುಕ್ತವಾಗಿ ಪೊಲೀಸರಲ್ಲಿ ತಿಳಿಸಲು ಸೂಚಿಸಿದ್ದಾರೆ. 

ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿ ಹೊತ್ತೊಯ್ದ ಖದೀಮರು :

ಚಿಕ್ಕಮಗಳೂರು : ಖದೀಮರು ದೇವಸ್ಥಾನದ ಬೀಗ ಓಡೆದು ಕಾಣಿಕೆ ಹುಂಡಿ ಹಾಗೂ ಹುಂಡಿಯಲ್ಲಿದ್ದ ಹಣವನ್ನು ದೋಚಿರುವ ಘಟನೆಯು ಬೆಳಕಿಗೆ ಬಂದಿದೆ. 


ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಶ್ರೀ ಸುಗ್ಗಿಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ಸಂಭವಿಸಿದ್ದು, ದೇವಾಲಯದ ಮುಂಬಾಗಿಲಿನ ಬೀಗ ಮುರಿದು ಕಳ್ಳರು ಹಣವನ್ನು ದೋಚಿದ್ದಾರೆ. ಕಳ್ಳತನ ನಡೆದಿರುವ ಕುರಿತಾಗಿ ದೇವಸ್ಥಾನದ ಪಕ್ಕದ ಮನೆಯವರು ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಈ ಕುರಿತು ನೋಡಿದಾಗ ಕಳ್ಳರು ಕಾಣಿಕೆ ಹುಂಡಿಯನ್ನು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. 

ಕಾಣಿಕೆ ಹುಂಡಿಯಲ್ಲಿ ಅಂದಾಜು 20 ರಿಂದ 25 ಸಾವಿರ ರೂಪಾಯಿ ಹಣವಿದ್ದು, ಈ ಕೃತ್ಯವನ್ನು ಎಸಗಿರುವ ಕಳ್ಳರನ್ನು ಅತೀ ಶೀಘ್ರವಾಗಿ ಬಂಧಿಸಿ ಹಣವನ್ನು ಪತ್ತೆ ಮಾಡಿಕೊಡಬೇಕಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.