ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಇಂದೂ ಸಹ ಮಳೆ ಮುಂದುವರಿದಿದ್ದು ಬಿರುಗಾಳಿ ಆರ್ಭಟಕ್ಕೆ ಮರ ಬಿದ್ದು ಮನೆಯೊಂದು ಸಂಪೂರ್ಣ ಜಖಂ ಆಗಿದೆ.

ಕಳಸ ತಾಲೂಕಿನ ಹೆಮ್ಮಕ್ಕಿ ಗ್ರಾಮದ ಈ ಘಟನೆ ನಡೆದಿದ್ದು ಮ, ಕೂಲಿ ಕಾರ್ಮಿಕ ಕ್ಲೆಮೆಂಡ್ ಡಿಸೋಜ ಎಂಬುವರ ಮನೆ ಮೇಲೆ ಮರ ಬಿದ್ದ ಪರಿಣಾಮ ಮನೆ ಜಖಂಗೊಂಡಿದೆ.


ಬೆಳಗಿನ ಜಾವ ಸುಮಾರು 4.30ರ ಸಮಯದಲ್ಲಿ ಮರ ಬಿದ್ದಿದ್ದು ಮನೆಯಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮನೆಯ ಮೇಲೆ ಮರಗಳು ಬೀಳುವ ಸಂಧರ್ಭವಿರುವ ಜನರು ಅರಣ್ಯ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಯ ನೆರವಿನೊಂದಿಗೆ ಮುಂಜಾಗ್ರತಾ ಕ್ರಮ ಕೈಗೊಂಡು ಅಪಾಯಕಾರಿ ಮರಗಳನ್ನು ತೆರವುಗೊಳಿಸಿ ಜಾಗರೂಕತೆ ವಹಿಸುವುದು ಸೂಕ್ತ.