ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುಡ್ಡೆ ತೋಟ ಮಾರ್ಗವಾಗಿ ಶೃಂಗೇರಿ ಹಾಗೂ ಹೊರನಾಡನ್ನು ಕಲ್ಪಿಸುವ ಮುಖ್ಯ ರಸ್ತೆಯ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ವಾಹನ ಸಂಚಾರಕ್ಕೆ ಕೆಲ ಕಾಲ ತಡೆಯುಂಟಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೇತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿರುವ ಪರಿಣಾಮ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಹಾಗೂ ಹೊರನಾಡಿಗೆ ಈ ಮಾರ್ಗದ ಮುಖಾಂತರ ರಸ್ತೆ ಸಂಚಾರಕ್ಕೆ ಕೆಲಕಾಲ ತಡೆಉಂಟಾಗಿತ್ತು.
ಸ್ಥಳೀಯರು ಹಾಗೂ ಸಿಬ್ಬಂದಿಗಳು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದು ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮರಗಳೂ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಕಾರಣ ತೆರವು ಕಾರ್ಯಾಚರಣೆಗೆ ಹೆಚ್ಚಿನ ಸಮಯ ತೆಗೆದುಕೊಂಡು ರಸ್ತೆಗೆ ಅಡ್ಡಲಾಗಿದ್ದ ಮರವನ್ನು ಹಾಗೂ ಕುಸಿದಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ.
ಗುಡ್ಡೇತೋಟ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಸದಸ್ಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಮರಗಳ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವುಮಾಡಿ ಕೊಟ್ಟಿದ್ದಾರೆ. ಬೆಳಗ್ಗೆ ಆರು ಗಂಟೆಯಿಂದ ಸ್ಥಳೀಯರು ತೆರವು ಕಾರ್ಯಾಚರಣೆ ನಡೆಸಲು ಧಾವಿಸಿದ್ದು ಪೋಲಿಸ್ ಅಧಿಕಾರಿಗಳು ಹಾಗೂ pwd ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ತುರ್ತಾಗಿ ಸ್ಥಳಕ್ಕೆ ಧಾವಿಸಿ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು.


.jpeg)



0 Comments