ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತೀ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಬೇಕೆಂದು ಜಿಲ್ಲಾಧಿಕಾರಿಗಳಾದ ಕೆ.ಎನ್ ರಮೇಶ್ ತಿಳಿಸಿದರು. 

ಈ ಕುರಿತು ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಪ್ರತಿಯೊಬ್ಬರಲ್ಲಿಯೂ ದೇಶಪ್ರೇಮವನ್ನು ಇಮ್ಮಡಿಗೊಳಿಸುವ ಸಲುವಾಗಿ ಈ ಅಭಿಯಾನವನ್ನು ಆಯೋಜಿಸಲಾಗಿದೆ 75 ನೆಯ ಸ್ವಾತಂತ್ರ್ಯ ದಿನಾಚರಣೆಗೆ ಮೆರಗು ತರುವಲ್ಲಿ ನಾಗರೀಕರ ಪಾತ್ರವೂ ಬಹಳಷ್ಟು ಪ್ರಾಮುಖ್ಯ ನೀಡುವಂತದ್ದು ಆದಕಾರಣ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸರ್ವರೂ ಉತ್ಸುಕತೆಯಿಂದ ಪಾಲ್ಗೊಳ್ಳಬೇಕು ಎಂದರು 


ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾಗೂ ನಗರಗಳಲ್ಲಿ ಈ ಕುರಿತಾಗಿ ವ್ಯಾಪಕ ಪ್ರಚಾರವನ್ನು ಕೈಗೊಳ್ಳಬೇಕು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನವನ್ನು ವೃದ್ಧಿಸುವ ಸಲುವಾಗಿ ಸ್ವಾತಂತ್ರ್ಯದ ಸಂಗ್ರಾಮವನ್ನು ಬಿಂಬಿಸುವ ರೀತಿಯ ಸಾಕ್ಷ ಚಿತ್ರಗಳ ಪ್ರದರ್ಶನ ನಡೆಸಬೇಕು ಎಂದು ಸೂಚಿಸಿದರು.

ಕೊರೋನ ಕಾರಣದಿಂದಾಗಿ ಬಹಳ ಸರಳವಾಗಿ ಎರಡು ವರ್ಷಗಳ ಕಾಲ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದು ಈ ಬಾರಿ ಅತ್ಯಂತ ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ತಿಳಿಸಿದರು.


ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಅಕ್ಷಯ್ ಹಾಕೆ, ಉಪವಿಭಾಗಾಧಿಕಾರಿ ಡಾಕ್ಟರ್ ಹೆಚ್ ಎಲ್ ನಾಗರಾಜ್, ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪಾ, ಜಿಲ್ಲಾ ಪಂಚಾಯತ್ ಸಿಇಓ ಜಿ ಪ್ರಭು ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.