ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕೃಷಿಕರಿಗೆ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಗೊಬ್ಬರದ ಅಂಗಡಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ನೊಟೀಸ್ ಜಾರಿಗೊಳಿಸಿದ್ದಾರೆ.
ಮೂಡಿಗೆರೆ : ಈಜುಕೊಳದಂತೆ ರಸ್ತೆಯಲ್ಲಿ ನಿಂತ ನೀರು; ಗುಂಡಿ ಬಿದ್ದ ರಸ್ತೆಯಲ್ಲಿ ಆಟೋ ನಿಲ್ಲಿಸಿ ಚಾಲಕರ ಪ್ರತಿಭಟನೆ
ರೈತರಿಗೆ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರಗಳ ಮಾರಾಟ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ತೇಜ ಫರ್ಟಿಲೈಸರ್ಸ್ ಉದ್ದೇಬೋರನಹಳ್ಳಿ ಇಲ್ಲಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದರು. ರಸಗೊಬ್ಬರ ನಿಯಂತ್ರಣ ಆದೇಶ 1985 ಹಾಗೂ ಅಗತ್ಯ ವಸ್ತುಗಳ ಕಾಯ್ದೆ 1955 ಕಾಯಿದೆಗಳನ್ನು ಉಲ್ಲಂಘನೆ ಮಾಡಿ ರೈತರಿಗೆ ರಸಗೊಬ್ಬರಗಳನ್ನು ಹೆಚ್ಚಿನ ದರಗಳಲ್ಲಿ ಮಾರಾಟ ಮಾಡುತ್ತಿದ್ದ ತೇಜ ಫರ್ಟಿಲೈಸರ್ ಇವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ, ದಾಸ್ತಾನು ಮಾಡಲಾಗಿದ್ದ ರಸಗೊಬ್ಬರಗಳನ್ನು ಮಾರಾಟ ಮಾಡದಂತೆ ಇಪ್ಪತ್ತೊಂದು ದಿನಗಳವರೆಗೆ ಮಾರಾಟ ತಡೆ ನೋಟಿಸ್ ನ್ನು ಅಧಿಕಾರಿಗಳು ಜಾರಿಗೊಳಿಸಿದ್ದಾರೆ.
ಪರಿಶೀಲನೆಯ ಸಂದರ್ಭದಲ್ಲಿ ರಸಗೊಬ್ಬರ ಪರವಾನಿಗೆಯಲ್ಲಿ ಸೇರ್ಪಡೆಯಾಗದ ಅನಧಿಕೃತ ಗೋದಾಮಿನಲ್ಲಿ ರಸಗೊಬ್ಬರ ದಾಸ್ತಾನು ಇರುವ ಕುರಿತು ಅಧಿಕಾರಿಗಳಿಗೆ ಅನುಮಾನ ಬಂದ ತಕ್ಷಣ ಬಾಳೆನಹಳ್ಳಿ ರಸ್ತೆಯಲ್ಲಿರುವ ತೇಜಾ ಫರ್ಟಿಲೈಜರ್ಸ್ ನ ರಸಗೊಬ್ಬರ ಮಾಲೀಕರಿಗೆ ಸೇರಿದ ಅನಧಿಕೃತ ಗೋದಾಮಿನಲ್ಲಿ ದಾಸ್ತಾನು ಇರಿಸಲಾಗಿದ್ದ ಸಾವಯವ ಗೊಬ್ಬರ ಮತ್ತು ಬೇವಿನ ಹಿಂಡಿಯ 170 ಚೀಲಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.
ಈ ದಾಳಿಯ ಸಂದರ್ಭದಲ್ಲಿ ಜಿಲ್ಲಾ ಜಾಗೃತದಳದ ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶ ಎಸ್ ಚವ್ಹಾಣ್ ಹೆಚ್ ಆರ್ ಸುರೇಶ್, ಸಹಾಯಕ ಕೃಷಿ ನಿರ್ದೇಶಕರು, ಚಿಕ್ಕಮಗಳೂರು ಇವರ ತಂಡದ ಸಿಬ್ಬಂದಿಗಳು ಇದ್ದರು.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :


.jpeg)



0 Comments