ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಉಂಟಾದ ವ್ಯಾಪಕ ಹಾನಿಯ ಪರಿಶೀಲನೆಯನ್ನು ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಡೆಸಿದರು. 

ಇದನ್ನೂ ಓದಿ : ಹಿಂದೂಪರ ಸಂಘಟನೆಗಳ ಇಬ್ಬರು ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಇಂದು ಸಂಪುಟದ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು ಮಳೆ ಗೋಡೆ ಕುಸಿತಗೊಂಡು ನೆಲೆ ಕಳೆದುಕೊಂಡಿರುವ ಜನರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು, ಸರ್ಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಿದರು, ಮಳೆಯಿಂದಾಗಿ  ನಿರಾಶ್ರಿತರಾಗಿರುವವರಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : 

https://forms.gle/APPtk8M3ZDk2oMka6


ನಂತರ ಸಿಎಂ ನೇತೃತ್ವದಲ್ಲಿ ಮಡಿಕೇರಿಯಲ್ಲಿ, ಜಿಲ್ಲೆಯಲ್ಲಿ ಮಳೆಗೆ ಆದ ಆಸ್ತಿಪಾಸ್ತಿ ನಷ್ಟ, ಜನಹಾನಿ, ತೊಂದರೆ ಮತ್ತು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು, ಉಸ್ತುವಾರಿ ಸಚಿವರು, ಕಂದಾಯ ಸಚಿವ ಆರ್ ಅಶೋಕ್, ಸಿ.ಸಿ ಪಾಟೀಲ್, ಆರ್ ನಾಗೇಶ್ ಸಂಸದರಾದ ಪ್ರತಾಪ್ ಸಿಂಹ, ಶಾಸಕರು, ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿರುವ ಕೆಲವು ಪ್ರದೇಶಗಳು, ಕೆಲವು ಕಡೆ ಭೂಕುಸಿತವಾಗಿದ್ದು, ಕೊಡಗಿನಲ್ಲಿ ಭೂಕಂಪ, ಕಡಲುಕೊರೆತವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿ ಪಕ್ಕದಲ್ಲಿರುವ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಜಲಾಶಯಗಳಿಂದ ನೀರು ಹೊರಬಿಟ್ಟ ಸಂದರ್ಭದಲ್ಲಿ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆಯಾಗಿದೆ. ಪ್ರಥಮ ಹಂತದ ಸಮೀಕ್ಷೆಯಾಗಿದೆ. ಈ ಬಗ್ಗೆ ವರದಿ ಬಂದ ನಂತರ ನಿಖರ ಮಾಹಿತಿ ನೀಡಲಾಗುವುದು ಎಂದರು.


ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ 1 ಲಕ್ಷದ 5 ಸಾವಿರ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಇತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಜಿಲ್ಲೆಗೆ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 

ಮುಖ್ಯಮಂತ್ರಿಗಳೊಂದಿಗೆ, ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.