ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯ ಆರ್ಭಟ ಜೋರಾಗಿದ್ದು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ವರುಣ ಬಿಟ್ಟು ಬಿಡದೆ ಸುರಿಯುತ್ತಿದ್ದಾನೆ. ಮಳೆ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು ಮುಂದಿನ 5 ದಿನಗಳ ಕಾಲ ಶಿವಮೊಗ್ಗದಲ್ಲಿ ಮತ್ತೆ ಮಳೆ ಅಲರ್ಟ್​ ಘೋಷಣೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅನೇಕ ಮನೆ, ಬೆಳೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, 129 ಮನೆಗಳು ಭಾಗಶಃ ಹಾನಿಯಾಗಿವೆ. 24 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. 


ಸಾವು ನೋವಿನ ಕುರಿತು ವರದಿ :

ಭಾರೀ ಮಳೆಯ ಸಂದರ್ಭದಲ್ಲಿ ರೈತರೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೂರು ಜಾನುವಾರುಗಳು ಸಾವನ್ನಪ್ಪಿವೆ. 1 ಜಾನುವಾರು ವಿದ್ಯುತ ಶಾಕ್ ಗೆ ಒಳಗಾಗಿ ಸತ್ತಿದೆ. ಉಳಿದ ಎರಡು ಜಾನುವಾರುಗಳು ನೀರಿನಲ್ಲಿ ಮುಳುಗಿವೆ. ಈ ನಷ್ಟಕ್ಕೂ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. 

ಜಿಲ್ಲೆಯಲ್ಲಿ ಬೆಳೆ ಹಾನಿ ಕುರಿತು ಯಾವುದೆ ವರದಿ ಬಂದಿಲ್ಲ. ಕೆಲವು ಕಡೆ ಜಮೀನು ಜಲಾವೃತವಾದ ವರದಿ ಬಂದಿದೆ ಈ ಕುರಿತು ಸೂಕ್ತ ಪರಿಶೀಲನೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಬೆಳೆ ಹಾನಿ ಸಂಭವಿಸುವುದಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : 

https://forms.gle/APPtk8M3ZDk2oMka6


ಜಿಲ್ಲೆಯ ಅಂಬಾಗುಡ್ಡದಲ್ಲಿ ಉಂಟಾದ ಗುಡ್ಡ ಕುಸಿತದ ಕುರಿತು ಪರಿಶೀಲನೆ ನಡೆಸುವಂತೆ ತಹಸೀಲ್ದಾರ್‌ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಅಗತ್ಯಕ್ಕೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ ಎಂದರು. 

ಸಾರ್ವಜನಿಕರು ಜಿಲ್ಲಾಡಳಿತ ಹೊರಡಿಸುವ ಸೂಚನೆಗಳನ್ನು ಪಾಲಿಸಿಕೊಂಡು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿವಹಿಸಿಕೊಂಡು ತಮ್ಮ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಸೂಚನೆ ನೀಡಲಾಗಿದೆ.