ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಹೊರವಲಯದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿರುವ ಘಟನೆ ಬೆಳಕಿಗೆ ಬಂದಿದೆ. 

ಇದನ್ನೂ ಓದಿ : Fact Check : ಭೂ ಕುಸಿತದಿಂದ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆಯೇ?

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹೊರವಲಯವಾದ ದುರ್ಗಾದೇವಸ್ಥಾನದ ಬಳಿಯಲ್ಲಿ ಈ  ಘಟನೆ ಸಂಭವಿಸಿದ್ದು ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಧರೆಗೆ ಗುದ್ದಿದೆ. 


ಅದೃಷ್ಟವಶಾತ್ ಎಂಬಂತೆ ಕಾರಿನಲ್ಲಿದ್ದವರು ಪ್ರಾಣಾಪಾಯಗಳಿಂದ ಪಾರಾಗಿದ್ದಾರೆ. ಓರ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾತ್ರಿ ಒಂದು ಗಂಟೆಯ ಆಸುಪಾಸಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ಕಾರಿನಲ್ಲಿದ್ದವರು ಕೊಗ್ರೆ ಮೂಲದವರು ಎನ್ನಲಾಗಿದೆ. 

ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಶವವಾಗಿ ಪತ್ತೆ : 

ಶಿವಮೊಗ್ಗ :  ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. 

ಚೋರಡಿಯಿಂದ ನದಿಯ ತಟದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ಮನೆಯಲ್ಲಿ ಹೇಳಿ ಬಂದಿದ್ದ 64 ವರ್ಷದ ನಾಗರತ್ನ ಎಂಬ ವೃದ್ಧೆ, ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಮೂರುದಿನದ ನಂತರ  ಆಕೆಯ ಮೃತದೇಹ ಪತ್ತೆಯಾಗಿದೆ. ಈಕೆ ಆತ್ಮಹತ್ಯೆಗಾಗಿ ನದಿಗೆ ಹಾರಿರುವುದಾ ಅಥವಾ ಪೂಜೆಗೆಂದು ನದಿಗೆ ಇಳಿದ ಪರಿಣಾಮ ನೀರುಪಾಲಾಗಿರುವುದಾ ಎಂಬುದರ ಕುರಿತಾಗಿ ಇನ್ನಷ್ಟೇ ಮಾಹಿತಿಗಳು ಲಭ್ಯವಾಗಬೇಕಿದೆ. ಘಟನಾ ಸಂಬಂಧ ಕುಂಸಿ ಠಾಣೆಯಲ್ಲಿ ನಾಪತ್ತೆಯಾಗಿರುವ ಕುರಿತು  ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಸಂಬಂಧ ಆಕೆಯನ್ನು ಪತ್ತೆ ಹಚ್ಚುವ ಕೆಲಸವನ್ನು ಆರಂಭಿಸಿದ್ದರು. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : 

https://forms.gle/APPtk8M3ZDk2oMka6


ಆಕೆಯ ಹುಡುಕಾಟಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಗಳು ಸತತ ಕಾರ್ಯಾಚರಣೆ ನೆಡಿಸಿದ್ದು ಸೇತುವೆಯ ಕಟ್ಟೆಯ ಮೇಲೆ ಪೂಜಾ ಬುಟ್ಟಿ ಹಾಗೂ ಬಟ್ಟೆಯೊಂದು ಇಟ್ಟು ನಾಗರತ್ನಮ್ಮ ಮಿಸ್ಸಿಂಗ್ ಆಗಿದ್ದರು.ಈ ಸುಳಿವಿನ ಮೇರೆಗೆ ಕಾರ್ಯಾಚರಣೆ ಇಳಿದ ಸಿಬ್ಬಂದಿಗಳು, ನಾಗರತ್ನ ಅವರ ಶವವನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಸಂಪೂರ್ಣ ತನಿಖೆಯ ನಂತರ ನಾಗರತ್ನ ಅವರದ್ದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಕುರಿತಾಗಿ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ.