ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ)  ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 

ಬಜರಂಗದಳದ ಇಬ್ಬರು ಸಕ್ರಿಯ ಕಾರ್ಯಕರ್ತರಾದ ಕಾಂತರಾಜು ಹಾಗೂ ಹರ್ಷ ಎಂಬ ಇಬ್ಬರ ಮೇಲೆ ನಿನ್ನೆ ರಾತ್ರಿಯವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ. ಕಳೆದ ಕೆಲ ತಿಂಗಳಹಿಂದೆ ಬಜರಂಗದಳದ ಸಕ್ರಿಯ ಕಾರ್ಯಕರ್ತ ಹರ್ಷನನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಲಾಗಿತ್ತು. ಈ ಬಳಿಕದಲ್ಲಿ ಸಂಪೂರ್ಣ ಶಿವಮೊಗ್ಗ ಉದ್ವಿಗ್ನಗೊಂಡಿತ್ತು. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6


ಪ್ರಸ್ತುತ ಹರ್ಷ ಎಂಬ ಬಜರಂಗದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದ ಮಥುರಾ ಪ್ಯಾರಡೈಸ್ ಬಳಿ ಮುಸ್ಲಿಂ ಯುವಕರಿಂದ ಹಲ್ಲೆ ನಡೆದಿದೆ. ಯುವತಿಯನ್ನು ಚುಡಾಯಿಸಿದವರನ್ನು ಪ್ರಶ್ನೆ ಮಾಡಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಗೀಡಾದ ಯುವಕ ಪ್ರಸ್ತುತ ಆಸ್ಪತ್ರೆ



ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. 

ಇಂದು ಬೆಳಗ್ಗೆ ಕಾಂತರಾಜು ಎಂಬ ಮೃತ ಹರ್ಷನ ಸ್ನೇಹಿತ ಹಾಗೂ ಬಜರಂಗದಳದ ಸಕ್ರಿಯ ಕಾರ್ಯಕರ್ತನಾದ ಕಾಂತರಾಜು ಮೇಲೆ ಮುಸ್ಲಿಂ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. ಕೊಲೆ ಮಾಡಲೆಂದು ಮಾರಕಾಸ್ತ್ರಗಳನ್ನು ಹೊಂದಿ ಮಾರಣಾಂತಿಕ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದು  ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.

ಹಿಂದೂ ಸಂಘಟನೆಗಳ ಆಕ್ರೋಶ :

ಹರ್ಷನ ಹತ್ಯೆಯ ಬಳಿಕವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ, ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೆಸರಿಗೆ ಮಾತ್ರ ಹೇಳಲಾಗುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿರುವುದು  ಅತ್ಯಂತ ಕಠೋರವಾಗಿದೆ ಎಂದು ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.