ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ತೋಟದ ಕೆಲಸಕ್ಕೆಂದು ಹೋಗಿದ್ದ ಮಹಿಳೆಯೋರ್ವರು ಹಳ್ಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಭವಾನಿ ಶಂಕರ್ ಎಂದು ಗುರುತಿಸಲಾಗಿದೆ. 

ಶೃಂಗೇರಿ: ನಾಪತ್ತೆಯಾಗಿದ್ದ ಮಹಿಳೆಯ ಶವ ಹಳ್ಳದಲ್ಲಿ ಪತ್ತೆ


ಎಂದಿನಂತೆ ಮಹಿಳೆಯು ತೋಟದ ಕೆಲಸಕ್ಕೆಂದು ತೆರಳಿದ್ದು ಸಂಜೆಯಾದರೂ ಮನೆಗೆ ಬಾರದ್ದನ್ನು ಕಂಡು ಕುಟುಂಬಸ್ಥರು ಆತಂಕದಿಂದ ಮಹಿಳೆಯನ್ನು ಹುಡುಕಾಡಿದ್ದರೆ. ಸುಮಾರು ರಾತ್ರಿ ಹನ್ನೊಂದು ಗಂಟೆಯ ವೇಳೆಗೆ ಮಹಿಳೆಯ ಶವ ಬಾಳೆಹಿತ್ತಲು ಹಳ್ಳದಲ್ಲಿ ಪತ್ತೆಯಾಗಿದೆ. 

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆಯು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮೃತರನ್ನು ಕಳೆದುಕೊಂಡಿರುವ ಕುಟುಂಬವರ್ಗ ಹಾಗೂ ಸ್ಥಳೀಯರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.


ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6