ಕಡೂರು : (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾ ವಚನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ.ಬಿ ಶಿವಶಂಕರ್ ಆಯ್ಕೆಯಾಗಿದ್ದಾರೆ. 

ಇದನ್ನೂ ಓದಿ : ಹಕ್ಕುಪತ್ರ ಹಗರಣದ ಬಳಿಕ ಶೃಂಗೇರಿಗೆ ಮೂರನೇ ತಹಸೀಲ್ದಾರ್ ಆಗಿ ಗೌರಮ್ಮ.ಪಿ ನೇಮಕ

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಜುಲೈ 09 ರಂದು ನಡೆಯಲಿರುವ ಜಿಲ್ಲಾ ವಚನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಹಾಗೂ ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಡಾ.ಬಿ ಶಿವಶಂಕರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.


ಡಾ.ಬಿ ಶಿವಶಂಕರ್ ಅವರು ಜಿಲ್ಲಾ ವಚನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಶೃಂಗೇರಿ ಜೆಸಿಐ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶೃಂಗೇರಿ ಶಿವಣ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಚನ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು ಪದಾಧಿಕಾರಿಗಳು ಹಾರೈಸಿದ್ದಾರೆ.

ಸೀಗೆಹಟ್ಟಿ ಹರ್ಷನ ರಕ್ತಸಿಕ್ತ ಫೋಟೋ ಅಪ್ಲೋಡ್ ಮಾಡಿದ ನಾಲ್ವರ ಮೇಲೆ ಕೇಸ್ ದಾಖಲು : 

ಶಿವಮೊಗ್ಗ : ಅಮಾನುಷವಾಗಿ ನಡು ರಸ್ತೆಯಲ್ಲಿ ಹತ್ಯೆಗೀಡು ಮಾಡಲಾಗಿದ್ದ ಬಜರಂಗದಳದ ಕಾರ್ಯಕರ್ತ ಸೀಗೆಹಟ್ಟಿ ಹರ್ಷನ ಹತ್ಯೆಯ ನಂತರದಲ್ಲಿ ಆತನ ರಕ್ತ ಸಿಕ್ತ ದೇಹದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಿರುವ ಪೊಲೀಸರು ಇನ್‌ಸ್ಟಾಗ್ರಾಮ್‌ ಸ್ಟೇಟಸ್‌ನಲ್ಲಿ ರಕ್ತ ಸಿಕ್ತನಾಗಿ ಬಿದ್ದ ಹರ್ಷನ ಫೋಟೋದೊಂದಿಗೆ ನಾಲ್ವರು ತಮ್ಮ ಫೊಟೊ ಅಪಲೋಡ್ ಮಾಡಿದ್ದರು, ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದು, ನಾಲ್ವರು ಅಪ್ರಾಪ್ತ ಬಾಲಕರ ವಿರುದ್ಧ ಸುಮೋಟೊ ಪ್ರಕರಣ‌ ದಾಖಲಾಗಿದೆ.


ಈ ನಾಲ್ಕು ಜನರಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲಿಸರು ವಿಚಾರಣೆ ನಡೆಸಿದ್ದಾರೆ. ಪಿಐ ಸಂಜೀವ್ ಕುಮಾರ್ ಗಸ್ತಿನಲ್ಲಿದ್ದಾಗ‌ ರಾಗಿಗುಡ್ಡದ ಬಳಿ ನಾಲ್ವರು ಅನುಮಾನಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಒರ್ವನ ಬಳಿಯಿದ್ದ ಮೊಬೈಲ್ ಪೋನಿನಲ್ಲಿ ಹತ್ಯೆಯಾದ ಹರ್ಷ ರಕ್ತಸಿಕ್ತವಾಗಿ ಬಿದ್ದಿರುವ ಪೋಟೊ ಜೊತೆಗೆ ಟ್ಯಾಗ್ ಲೈನ್ ಹಾಕಲಾಗಿತ್ತು. ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದು ಸ್ಟೇಟಸ್ ಹಾಕಿ ಹೆಸರು ಮಾಡಲು ಹೊರಟಿದ್ದ ನಾಲ್ವರು ವಿರುದ್ಧ ಪ್ರಕರಣ ದಾಖಲಾಗಿದೆ.

ಹರ್ಷನ ಹತ್ಯೆಯ ನಂತರದಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮನೆಗಳಿಗೆ ವಾಹನಗಳಿಗೆ ಕಲ್ಲು ತೂರಾಟ ಬೆಂಕಿ ಹಚ್ಚಿ ಉದ್ರಿಕ್ತರ ಗುಂಪು ತೀವ್ರ ಮಟ್ಟದ ಹಾನಿಯನ್ನು ಮಾಡಿತ್ತು. ಬಳಿಕದಲ್ಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಬಹಳಷ್ಟು ಹರಸಾಹಸಪಟ್ಟಿದ್ದರು.