ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯೋರ್ವರು ಮನೆಯಿಂದ ನಾಪತ್ತೆಯಾಗಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶೃಂಗೇರಿ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೂತುಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವೈಕುಂಠಪುರದ ಮಹಿಳೆ ಗುಲಾಬಿ (50) ಎಂಬುವವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದ್ದು ಪೊಲೀಸರು ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. 


ಘಟನಾ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮಹಿಳೆಯು ಮನೆಯಿಂದ ನಾಪತ್ತೆಯಾಗಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವೈಕುಂಠಪುರದ ಸುಂಕುರ್ಡಿ ಸಮೀಪದ ಹಳ್ಳದ ದಡದಲ್ಲಿ ಸೀರೆಯೊಂದು ದೊರೆತಿದ್ದು ಈ ಕುರಿತಾಗಿ ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಸಹ ಭೇಟಿ ನೀಡಿದ್ದು ಈ ಸಂಬಂಧ ಕಾರ್ಯಾಚರಣೆ ನಡೆಸಿದ್ದಾರೆ. ಕುರಿತಾದ ಹೆಚ್ಚಿನ ಮಾಹಿತಿಗಳು ತನಿಖೆ ಹಾಗೂ ಕಾರ್ಯಾಚರಣೆಯ ಬಳಿಕವಷ್ಟೇ ನಿಖರವಾಗಿ ದೊರೆಯಲಿದೆ.