ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಬ್ಲೇಡ್ ನಿಂದ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. 

ಇದನ್ನೂ ಓದಿ : ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದ ಕಾರು

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಸೂಸಲವಾನಿ ಪೌಲೋಸ್ ಬ್ಲೇಡಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. 


ಮೃತ ಫೌಲೋಸ್ ಹಾಗೂ ಮಥಾಯ್ ಇಬ್ಬರು ಸಹೋದರರು. ಕಳೆದ ನಾಲ್ಕು ವರ್ಷಗಳ ಹಿಂದೆ ಮಥಾಯ್ ಮೃತಪಟ್ಟಿದ್ದರು. ಅವರ ಸಾವಿನಿಂದಾಗಿ ಅತೀವ ದುಃಖಕ್ಕೀಡಾಗಿ ಖಿನ್ನತೆಗೆ ಒಳಗಾಗಿದ್ದ ಪೌಲೋಸ್, ಶುಗರ್, ಟಿ.ಬಿ ರೋಗಕ್ಕೂ ತುತ್ತಾಗಿ ಹಾಸಿಗೆ ಹಿಡಿದಿದ್ದರು.  ಭಾನುವಾರ ಬೆಳಗ್ಗಿನ ಜಾವ ಶೇವಿಂಗ್ ಮಾಡಿಕೊಳ್ಳುವ ಸಲುವಾಗಿ ಬ್ಲೇಡ್ ನ್ನು ತೆಗೆದುಕೊಂಡ ಪೌಲೋಸ್ ತನ್ನ ಕೈಯನ್ನು ಬ್ಲೇಡಿನಿಂದ ಕೊಯ್ದುಕೊಂಡಿದ್ದಾನೆ. ಈ ಸಂದರ್ಭದಲ್ಲಿ ಆತನ ಕೈಯಿಂದ ಅತಿಯಾದ ರಕ್ತಸ್ರಾವವಾಗಿದ್ದು ಮನೆಯವರು ತಕ್ಷಣವೇ ಆಂಬುಲೆನ್ಸ್ ನ ಸಹಾಯದಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಒದಗಿಸಿದರು. 

ಆದರೆ ಅತಿಯಾದ ರಕ್ತಸ್ರಾವ ಉಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಶಿವಮೊಗ್ಗದ ಖಾಸಗೀ ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಫೌಲೋಸ್ ದೇಹ ಸ್ಪಂದಿಸಿದ ಕಾರಣ ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6


ಆತ್ಮಹತ್ಯೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಫೌಲೋಸ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.