ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಬೈಕ್ ಗಳನ್ನು ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆಹಿಡಿದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೊಸ ಸಂತೆಮಾರ್ಕೆಟ್ ಹತ್ತಿರವಿರುವ ಚಾನಲ್ ಕೇರಿ ರಸ್ತೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳರು ಕಳ್ಳತನ ನಡೆಸಿದ್ದರು. ಈ ಕುರಿತಾಗಿ ವಾಹನದ ಮಾಲೀಕರು ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದರು. 

ಇದನ್ನೂ ಓದಿ :  ಹಿರಿಯ ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್ ನಾಗರಾಜ್ ವರ್ಗಾವಣೆ


ಈ ಪ್ರಕರಣದ ಆರೋಪಿಯಾದ  ಶಿವಮೊಗ್ಗದ ಹನುಮಂತನಗರ ನಿವಾಸಿ ರಾಜಪ್ಪ ಎಂಬ 35 ವರ್ಷ ಪ್ರಾಯದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ ಪ್ರಕರಣದ ಕುರಿತಾಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಬಂಧಿತನಿಂದ 265,000 ರೂಪಾಯಿ ಮೌಲ್ಯದ 09 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ ಸಂಬಂಧ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. 

ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ಈ ಕುರಿತಾಗಿನ ಪೂರ್ಣ ಮಾಹಿತಿ ಲಭ್ಯವಾಗಲಿದೆ. ಈ ಕಾರ್ಯಾಚರಣೆಯನ್ನು ಶಿಕಾರಿಪುರ ಟೌನ್ ಪೊಲೀಸ್ ಠಾಣಾ ಪಿಎಸೈ ಹಾಗೂ ಸಿಬ್ಬಂದಿಗಳ ತಂಡ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ.