ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲಾ ಪೋಕ್ಸೋ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.
2018 ರಲ್ಲಿ ಶಿವಮೊಗ್ಗ ಜಿಲ್ಲೆಯಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45) ಎಂಬ ಕಾಮುಕ ಅದೇ ಗ್ರಾಮದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ, ಈ ಕುರಿತಾಗಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪತ್ತೆ ಮಾಡಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಈ ಕುರಿತು ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಲಯದ ಫಾಸ್ಟ್ ಟ್ರಾಕ್ ಕೋರ್ಟ್ನಲ್ಲಿ ವಿಚಾರಣೆ ನಡೆಸಿದ ನ್ಯಾಯಧೀಶರಾದ ಮೋಹನ್.ಜೆ.ಎಸ್ ಅವರು ಆರೋಪಿ ಮಾಡಿದ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಎಸಗಿದ್ದ ಹನುಮಂತಪ್ಪನಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ ದಂಡ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದು ದಂಡ ಕಟ್ಟಲು ಸಾಧ್ಯವಾಗದೇ ಇದ್ದಲ್ಲಿ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದ ಸಲುವಾಗಿ ಕೋರ್ಟ್ ನಲ್ಲಿ ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ವಾದ ಮಂಡನೆಮಾಡಿದರು.







0 Comments