ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಮನವಿ ಸಲ್ಲಿಸಿದೆ. 

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್‌ ಮೀಗಾ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಾಮೂಹಿಕ ರಾಜೀನಾಮೆ ನೀಡಿದ ಪದಾಧಿಕಾರಿಗಳ ಸಭೆ ; ರಾಜೀನಾಮೆ ಹಿಂಪಡೆಯಲು ಆದೇಶ


ಪ್ರಸ್ತುತ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದ್ದು ಕ್ಷೇತ್ರದಲ್ಲಿ ಅವರ ವರ್ತನೆಯಿಂದ ಎಲ್ಲರೂ ಬೇಸತ್ತಿದ್ದಾರೆ. ದಿ. ಇಂದಿರಾಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದಂತಹ ಕ್ಷೇತ್ರದಿಂದ ನಿಮ್ಮಂತಹ ಜನನಾಯಕರು ಸ್ಪರ್ಧಿಸಿದರೆ ಮತ್ತೊಮ್ಮೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪುನರ್ಜನ್ಮವಾಗಲಿದೆ.

ಈ ಕಾರಣದಿಂದ ತಮ್ಮ ಜನಮದಿನದ ಸಂದರ್ಭದ ಈ ವೇದಿಕೆಯಲ್ಲಿ ಮನವಿ ಪುರಸ್ಕರಿಸುವಂತೆ ಕೋರುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ತನು ಕೊಟ್ಟಿಗೆಹಾರ, ವರದಿಗಾರರು