ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶ್ರೀ ರಾಘವೇಂದ್ರ ಸ್ವಾಮಿಗಳ 351 ನೇ ಆರಾಧನಾ ಮಹೋತ್ಸವದ ಅಂಗವಾಗಿ ಶೃಂಗೇರಿಯ ರಾಘವೇಂದ್ರ ಸ್ವಾಮಿ ಬೃಂದಾವನ ಸೇವಾ ಸಮಿತಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಇದನ್ನೂ ಓದಿ : ಶೃಂಗೇರಿ ಪಟ್ಟಣದಲ್ಲಿ ಬೆಳ್ಳಂ ಬೆಳಗ್ಗೆ ಕಾರು ಹಾಗೂ ಆಟೋ ನಡುವೆ ರಸ್ತೆ ಅಪಘಾತ
ಶೃಂಗೇರಿಯ ಕಲ್ಕಟ್ಟೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ 12.08.2022 ರಿಂದ 14.08.2022 ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 351 ನೇ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶೃಂಗೇರಿಯ ರಾಘವೇಂದ್ರ ಸ್ವಾಮಿ ಸೇವಾ ಸಮಿತಿಯ ಪದಾಧಿಕಾರಿಗಳು ಆಯೋಜಿಸಿದ್ದಾರೆ.
ದಿನಾಂಕ 12.08.2022 ರಂದು ರಾಮತಾರಕ ಹೋಮ, ಅನ್ನಸಂತರ್ಪಣೆ ಹಾಗೂ ಸಂಜೆ 5 ರಿಂದ 7.45 ರ ವರೆಗೆ ಭಜನಾ ಕಾರ್ಯಕ್ರಮ ನಂತರದಲ್ಲಿ ಮಹಾಮಂಗಳಾರತಿ ನೆರವೇರಲಿದೆ.
ದಿನಾಂಕ 13.08.2022 ರ ಶನಿವಾರ ಬೆಳಗ್ಗೆ 07 ಗಂಟೆಗೆ ಆಂಜನೇಯ ಮೂಲಮಂತ್ರ ಹೋಮ, 9.30 ರಿಂದ ಪಂಚಾಮೃತ ಅಭಿಷೇಕ, ಮಧ್ಯಾಹ್ನ 1.30 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ನಡೆಯಲಿದೆ. ಬೆಳಗ್ಗೆ 9.30 ರಿಂದ ವಿಧುಷಿ ಶ್ರೀಮತಿ ಪಾವನಿ ನಾಗಸಿಂಹ ಮತ್ತು ವೃಂದದಿಂದ ಭಕ್ತಿ ಸಂಗೀತ ನಡೆಯಲಿದ್ದು ಅಂದು ಸಂಜೆ ಶ್ರೀ ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿ ಶೃಂಗೇರಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಆಗಸ್ಟ್ 14 ರ ಭಾನುವಾರದಂದು ಬೆಳಗ್ಗೆ ಪವಮಾನ ಅಭಿಷೇಕ ನಡೆಯಲಿದ್ದು ಮಧ್ಯಾಹ್ನ ಒಂದು ಗಂಟೆಗೆ ಮಹಾಮಂಗಳಾರತಿ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಕಾರ್ಯಕ್ರಮದ ಕುರಿತಾಗಿ ರಾಘವೇಂದ್ರ ಸ್ವಾಮಿ ಬೃಂದಾವನ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.






0 Comments