ಭಾರತೀಯ ಜನತಾ ಪಾರ್ಟಿ ಚಿಕ್ಕಮಗಳೂರು ಯುವಮೋರ್ಚಾ ಜಿಲ್ಲಾಧ್ಯಕ್ಷರಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲದ, ಸಕ್ರಿಯ ಬಿಜೆಪಿ ಕಾರ್ಯಕರ್ತ ಸಂತೋಷ್ ಕೋಟ್ಯಾನ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕಲ್ಭರುಡಪ್ಪ ಅವರ ಆದೇಶದ ಮೇರೆಗೆ ಎಂ.ಆರ್. ದೇವರಾಜ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ನೀಡಿದ್ದಾರೆ.
ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಜವಾಬ್ದಾರಿ ಹೊತ್ತವರು ಎಲ್ಲರೂ ರಾಜೀನಾಮೆ ನೀಡಿದ್ದರು, ಈಗ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಹಿಂದೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದ ಸಂತೋಷ್ ಕೋಟ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಯುವಮೋರ್ಚಾ ತಂಡ ರಾಜೀನಾಮೆ ನೀಡಿದ್ದಾಗ ಈ ಹಿಂದಿನ ಜಿಲ್ಲಾ ಅಧ್ಯಕ್ಷರು ತೇಜಸ್ವಿ ಸೂರ್ಯ ಜೊತೆಗಿನ ಮಾತುಕತೆಯ ಆಡಿಯೋ ಸಹ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು.






0 Comments