ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಗಾಳಿಸಹಿತ ರಣ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಇಂದೂ ಕೂಡ ಮಳೆಯ ಅಬ್ಬರ ಜೋರಾಗಿರುವುದರಿಂದ ಮಕ್ಕಳ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಅಂಗನವಾಡಿಯಿಂದ ಹತ್ತನೇ ತರಗತಿಯವರೆಗೆ ರಜೆ ಘೋಷಣೆ ಮಾಡಿ ಮೂಡಿಗೆರೆ ತಹಸೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.
ಮಳೆಯ ತೀವ್ರತೆಗೆ ಈಗಾಗಲೇ ಅನೇಕರು ತಮ್ಮ ವಾಸದ ಮನಗೆಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮೊನ್ನೆ ಮನೆ ಮೇಲೆ ಮರಬಿದ್ದ ಪರಿಣಾಮ ಇಬ್ಬರು ಮಹಿಳೆಯರು ದುರ್ಮರಣವನ್ನಪ್ಪಿದ್ದರು. ಹಳ್ಳ ಕೊಳ್ಳಗಳು ಉಕ್ಕಿಹರಿದು ಶಾಲಾ ಕಾಲೇಜುಗಳ ಮಕ್ಕಳು ತೆರಳಲು ಅಡ್ಡಿ ಉಂಟಾಗಿದ್ದ ಪರಿಣಾಮ ಇಂದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.






0 Comments