ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿದಾಳಿ ಮುಂದುವರಿದಿದೆ. ಕೆಲ ದಿನಗಳ ಹಿಂದಷ್ಟೇ ಹಸುವನ್ನು ಬಳಿ ಪಡೆದುಕೊಂಡಿದ್ದ ಹುಲಿ ಮತ್ತೆ ದಾಳಿನಡೆಸಿದ್ದು ಜಾನುವಾರನ್ನು ಬಲಿಪಡೆದುಕೊಂಡಿದೆ. 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಳ್ಳಿ ಗ್ರಾಮದಲ್ಲಿ ಹುಲಿ ದಾಳಿಗೆ ಜಾನುವಾರು ಬಲಿಯಾಗಿದೆ. ಮೂಡಿಗೆರೆಯ ಬಾನಳ್ಳಿ ಸುಂದರೇಶ್ ಎಂಬುವರಿಗೆ ಸೇರಿದ ಜಾನುವಾರು ಇಂದು ಮುಂಜಾನೆ ವ್ಯಾಘ್ರನ ದಾಳಿಗೆ ಬಲಿಯಾಗಿದೆ.


ಆಗಾಗ ಜಾನುವಾರುಗಳನ್ನು ಹುಲಿ ಬಲಿ ಪಡೆಯುತ್ತಿದ್ದು ಸ್ಥಳೀಯರು ಆತಂಕಕ್ಕೆ ಸಿಲುಕಿದ್ದಾರೆ. ಬಾನಳ್ಳಿ, ಮತ್ತಿಕಟ್ಟೆ, ಹೊಸಳ್ಳಿ, ಭಾರತಿಬೈಲು ಸುತ್ತಮುತ್ತ ಹುಲಿ ಓಡಾಡುತ್ತಿದ್ದೆ ಎನ್ನಲಾಗಿದ್ದು ತೋಟ, ಗದ್ದೆಗಳಲ್ಲಿ ಕೆಲಸ ಮಾಡುವ ರೈತರು, ಓಡಾಡುವ ಜನಸಾಮಾನ್ಯರು ಭಯದ ವಾತಾವರಣದಲ್ಲಿರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹುಲಿ ಹಿಡಿಯುವಂತೆ ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದು ಸಂಬಂಧಿಸಿದ ಅಧಿಕಾರಿಗಳು ಈ ಕುರಿತಾಗಿ ಗಮನಹರಿಸಿ ಸೂಕ್ತವಾದ ಕ್ರಮ ಕೈಗೊಳ್ಳಬೇಕಿದೆ. ಘಟನಾ ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯರಕ್ಷಕ ಮೊಹಿಸೀನ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

- ತನು ಕೊಟ್ಟಿಗೆಹಾರ, ವರದಿಗಾರರು