ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಬೈಕ್​ಗೆ ಹಿಂದಿನಿಂದ ಲಾರಿ ಡಿಕ್ಕಿಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ : ಚಿಕ್ಕಮಗಳೂರು : ರಾಷ್ಟ್ರ ಧ್ವಜವನ್ನು ಸಿಗರೇಟ್ ನಿಂದ ಸುಟ್ಟಿದ್ದ ಕಿಡಿಗೇಡಿ ಅರೆಸ್ಟ್

ಶಿವಮೊಗ್ಗದ ಬೈಪಾಸ್ ರಸ್ತೆ ಯಮಹಾ ಶೋ ರೂಮ್​​ ಬಳಿಯ ನಿವಾಸಿ ಸಂಜಿದಾ ಮೃತ ದುರ್ದೈವಿ. ಪತಿಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದ್ದು, ಲಾರಿ ಚಕ್ರ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಅಪಘಾತ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತರನ್ನು ಕಳೆದುಕೊಂಡಿರುವ ಮನೆಯವರು ತೀವ್ರ ಬೇಸರವನ್ನು ಹೊರಹಾಕಿದ್ದಾರೆ.