ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮಳೆ ಹಾನಿಗೆ ಸಂಬಂಧಿಸಿದಂತೆ ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಂಭವಿಸಿದ ಭಾರೀ ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿಗಳು ವಿಳಂಬಗೊಂಡ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಚಾರ್ಜ್ ಮಾಡಿದ್ದಾರೆ.
ಕಳೆದ ನವೆಂಬರ್ ತಿಂಗಳಿನಲ್ಲಿ ಮುಗಿಯಬೇಕಿದ್ದ ಕಾಮಗಾರಿಯು ಆಗಸ್ಟ್ ತಿಂಗಳು ಬಂದರೂ ಮುಗಿಯದ ಪರಿಣಾಮ ತೀವ್ರ ತರಾಟೆಗೆ ತೆಗೆದುಕೊಂಡ ಸಚಿವರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಹಾಕಿ ಎಂದು ಆಕ್ರೋಶಭರಿತರಾದರು.
ಗುತ್ತಿಗೆದಾರನಿಂದ ಉಂಟಾದ ಲೋಪಕ್ಕೆ ಜನರು ಜನಪ್ರತಿನಿಧಿಗಳನ್ನು ಕೇಳುತ್ತಾರೆ, ಇದಕ್ಕೆ ಹೊಣೆಯಾರು ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸಚಿವರು ಕಾಮಗಾರಿಗೆ ಸಂಬಂಧಿಸಿದ ಗುತ್ತಿಗೆದಾರನ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಕೆ .ಎನ್ ರಮೇಶ್, ಸಿಇಒ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ರೂಪಾ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಎಂ.ಕೆ ಪ್ರಾಣೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್, ಚಿಕ್ಕಮಗಳೂರು ನಗರಸಭಾ ಅಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

.jpeg)


0 Comments