ಮೂಡಿಗೆರೆ : ಆನೆದಾಳಿಯಿಂದ ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಕ್ಕೊಳಗಾಗಿರುವ ಘಟನೆ ವರದಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲರಹಳ್ಳಿ ಗ್ರಾಮದ 52 ವರ್ಷ ಪ್ರಾಯದ ಎಂ.ಬಿ ಶಿವಣ್ಣ ಎಂಬುವವರ ಮೇಲೆ ಆನೆ ದಾಳಿ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಾಯಗೊಂಡಿರುವ ಅವರಿಗೆ ಚಿಕಿತ್ಸೆ ಒದಗಿಸುತ್ತಿದ್ದು ಈ ಭಾಗದಲ್ಲಿ ನಡೆಯುತ್ತಿರುವ ಆನೆ ದಾಳಿಯು ಜನರನ್ನು ತೀವ್ರ ಆತಂಕಕ್ಕೊಳಗಾಗುವಂತೆ ಮಾಡಿದೆ. ಕೃಷಿಯನ್ನು ಜೀವನಧಾರವಾಗಿ ನಂಬಿಕೊಂಡು ಹೊಲಗದ್ದೆಗಳಲ್ಲಿ ಕಾರ್ಯನಿರ್ವಹಿಸುವ ಕೃಷಿಕರು ಒಂದೆಡೆ ಆನೆ ದಾಳಿಗೆ ಬೆಳೆಗಳನ್ನು ರಕ್ಷಿಸಿಕೊಳ್ಳಲಾರದೆ ನಲುಗಿದ್ದರೆ, ವಾಹನಗಳಲ್ಲಿ ಸಂಚಾರ ಮಾಡುವ ವಾಹನ ಸವಾರರು ಕೂಡ ಆತಂಕದಿಂದಲೇ ಓಡಾಡುವಂತಹ ಸ್ಥಿತಿ ಎದುರಾಗಿದೆ.
ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಈ ಕುರಿತಾಗಿ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಕೋರಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು






0 Comments