ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅತಿಯಾದ ಮಳೆಯಿಂದ ಹಲವಾರು ಅವಾಂತರ ಸೃಷ್ಟಿಯಾಗಿ ಚೇತರಿಸಿಕೊಳ್ಳುವ ಮೊದಲೇ ಮತ್ತೆ ಮಳೆರಾಯ ಬರುವ ಸೂಚನೆ ಕಾಣುತ್ತದೆ.

ಇದನ್ನೂ ಓದಿ : ಮೂಡಿಗೆರೆ : ಆನೆ ದಾಳಿಯಿಂದ ವ್ಯಕ್ತಿಗೆ ಗಾಯ, ಆತಂಕದಲ್ಲಿ ಸ್ಥಳೀಯರು

ಮಲೆನಾಡು ಸೇರಿ ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.




ಮಲೆನಾಡಿನ ಜಿಲ್ಲೆಗಳಲ್ಲಿ ಸಹ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 23 ಹಾಗೂ 24 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 24 ರ ಬಳಿಕ ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.