ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರಿಗೆ ತೀವ್ರತರಹದ ನಷ್ಟಗಳು ಸಂಭವಿಸಿದ್ದು ಈ ನಷ್ಟವನ್ನು ಸರಿದೂಗಿಸಿ ರೈತರಿಗೆ ಅನುಕೂಲ ಮಾಡುವ ಉದ್ದೇಶದಿಂದ ಬೆಳೆಗಾರರ ಸಾಲ ಮನ್ನಾ ಜೊತೆಗೆ ಪರಿಹಾರ ಧನವನ್ನು ನೇರವಾಗಿ ರೈತರ ಖಾತೆಗೆ ಹಾಕಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಅನೇಕ ಭಾಗಗಳು ಹಾಗೂ ಇಲ್ಲಿನ ಕೃಷಿಕರು ಈ ಬಾರಿ ಮಳೆಯಿಂದಾಗಿ ನಲುಗಿದ್ದು, ಮಳೆಯಿಂದ ಬೆಳೆಹಾನಿಗೊಳಗಾಗಿರುವ ಬೆಳೆಗಾರರ ಸಾಲ ಮನ್ನಾ ಜೊತೆಗೆ ಪರಿಹಾರ ಧನವನ್ನು ನೇರವಾಗಿ ರೈತರ ಖಾತೆಗೆ ಹಾಕಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ : ಗೋಹತ್ಯೆ ಮಾಡಲು ಯತ್ನಿಸುತ್ತಿದ್ದ ಸೈಯದ್ ಸಲೀಂ ಬಂಧನ ; ಮೂರು ಹಸುಗಳನ್ನು ರಕ್ಷಿಸಿದ ಪೊಲೀಸರು
ಬಿಟ್ಟುಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಬಯಲು ಸೀಮೆಭಾಗಗಳಾದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿ ಹಾಗೂ ಮಲೆನಾಡು ಭಾಗದ ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ಕೊಪ್ಪ ಹಾಗೂ ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಬೆಳೆಗಾರರು ತೀವ್ರತರಹದ ನಷ್ಟವನ್ನು ಅನುಭವಿಸುತ್ತಿದ್ದಾರೆ. ರೈತರ ಕಷ್ಟವನ್ನು ನೀಗಿಸುವ ನಿಟ್ಟಿನಲ್ಲಿ ರೈತರ ಸಾಲ ಮನ್ನಾ ಜೊತೆಗೆ ಪರಿಹಾರ ಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಮತ್ತು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಪರವಾಗಿ ಕೋರಿದರು.
ಈಗಾಗಲೇ ಬೆಳೆ ಹಾನಿ ಬಗ್ಗೆ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಮೀಕ್ಷೆ ನಡೆಸಿದ್ದು, ಎಲ್ಲ ನಷ್ಟದ ಮಾಹಿತಿಗಳು ಇಲಾಖೆಗಳ ಬಳಿಯಿರುವುದರಿಂದ ದಾಖಲೆಗಳಿಗೆ ರೈತರನ್ನು ಸತಾಯಿಸುತ್ತಿದೆ. ಈ ಕುರಿತಾಗಿ ಕ್ರಮ ಕೈಗೊಂಡು ಪರಿಹಾರ ಧನವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕೆಂದು ಮನವಿ ಸಲ್ಲಿಸಿದರು.

.jpeg)




0 Comments