ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ತುಂಬಿದ್ದ ಲಾರಿಯೊಂದು ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ : ಮೂಡಿಗೆರೆ: ಹುಲಿ ದಾಳಿಗೆ ಜಾನುವಾರು ಬಲಿ; ಆತಂಕದಲ್ಲಿ ಸ್ಥಳೀಯರು
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ ಕಳಸ, ಕುದುರೆಮುಖ, ಕಾರ್ಕಳ, ಮಂಗಳೂರು ಭಾಗವನ್ನು ಸಂಪರ್ಕಿಸುವ ಮಾರ್ಗಮಧ್ಯೆಯಾದ ಕೆರೆಕಟ್ಟೆಯ ಪಾಂಡರಮಕ್ಕಿ ಬಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಕ್ಕಿ ತುಂಬಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿದೆ.
ಮರದ ಸಹಾಯದಿಂದ ಸಂಪೂರ್ಣವಾಗಿ ಉರುಳದೇ ಹಾಗೆ ನಿಂತಿದ್ದು, ಲಾರಿಯಲ್ಲಿದ್ದ ಮೂವರ ಅದೃಷ್ಟವಶಾತ್ ಎಂಬಂತೆ ಬಚಾವಾಗಿದ್ದಾರೆ. ಕಳೆದ ಕೆಲದಿನಗಳ ಹಿಂದೆಯಷ್ಟೇ ಈ ಮಾರ್ಗದಲ್ಲಿ ಲಾರಿ ಹಾಗೂ ಕಾರಿನ ನಡುವೆ ರಸ್ತೆ ಅಪಘಾತ ಸಂಭವಿಸಿತ್ತು.
ಲಾರಿಯು ಕಾರ್ಕಳದ ಕಡೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಕಡಿದಾದ ತಿರುವು ಹಾಗೂ ಕಿರಿದಾದ ರಸ್ತೆಯನ್ನು ಹೊಂದಿರುವ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿಕೊಂಡು ನಿಧಾನಗತಿಯಲ್ಲಿ ಸಾಗಬೇಕಿದೆ.





0 Comments