ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರುಗಳು ರಾಜ್ಯದ ಗೃಹ ಸಚಿವರ ಹಾಗೂ ವ್ಯವಸ್ಥೆಯ ವಿರುದ್ಧವಾಗಿ ತೀವ್ರ ಆಕ್ರೋಶ ಹೊರಹಾಕಿದ್ದರು. ಅನೇಕ ಜಿಲ್ಲೆಗಳಲ್ಲಿ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು ಅಂತೆಯೇ ಶೃಂಗೇರಿ ತಾಲೂಕು ಬಿಜೆಪಿ ಸಹ ಘಟನೆಯನ್ನು ಖಂಡಿಸಿ ಸಾಮೂಹಿಕವಾಗಿ ರಾಜೀನಾಮೆ ನೀಡಿತ್ತು. ಈ ರಾಜೀನಾಮೆಯ ಕುರಿತಾಗಿ ನಿನ್ನೆ ಚಿಕ್ಕಮಗಳೂರಿನ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಅವರು ರಾಜೀನಾಮೆ ನೀಡಿದ ಬಿಜೆಪಿ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ ಅವರ ಮನವೊಲಿಸುವ ಪ್ರಯತ್ನ ನಡೆಸಿ ರಾಜೀನಾಮೆ ಹಿಂಪಡೆಯಬೇಕೆಂದು ಆದೇಶಿಸಿದ್ದಾರೆ. 


ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜ್ ಶೆಟ್ಟಿ ಭೇಟಿ ನೀಡಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ ಎಲ್ಲಾ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಸರ್ಕಾರ ಕಾರ್ಯಕರ್ತರ ಭಾವನೆಗಳಿಗೆ ಬೆಲೆ ನೀಡುತ್ತದೆ, ಮುಂದಿನ ದಿನಗಳಲ್ಲಿ ಕಾರ್ಯಕರ್ತರ ರಕ್ಷಣೆ, ಆತ್ಮವಿಶ್ವಾಸ ಮೂಡಿಸುವ ಬಗ್ಗೆ ಭರವಸೆ ನೀಡುತ್ತಾ, ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ಹಿಂಪಡೆಯಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ. 

ಅಂತೆಯೇ ಭಾರತೀಯ ಜನತಾಪಕ್ಷ ಇನ್ನೊಮ್ಮೆ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ತಿಳಿಸಿದ್ದು ಪದಾಧಿಕಾರಿಗಳು ಒಗ್ಗಟ್ಟಿನಿಂದ ಪಕ್ಷಕ್ಕಾಗಿ ಕೆಲಸ ಮಾಡುವ ನಿರ್ಧಾರ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿಗಳು, HS ನಟೇಶ್, ಶೃಂಗೇರಿ ಶಿವಣ್ಣ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಅಂಬ್ಲ್ಯೂರ್ ರಾಮಕೃಷ್ಣ, ಹರೀಶ್ V ಶೆಟ್ಟಿ, ಕಚ್ಚೋಡಿ ಶ್ರೀನಿವಾಸ್, ಅರುಣ್ ಕಣ್ಣುಕುಟ್ಲು ಪ ಪಂ ಸದಸ್ಯ ಅರುಣ್ ಉಪಸ್ಥಿತಿ ಇದ್ದರು