ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಸ್ಕೂಟಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ಚಾಲಕ ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ : ಮದುವೆ ಮುಗಿಯುತ್ತಿದ್ದಂತೆ ಅರ್ಚಕ, ಫೋಟೋಗ್ರಾಫರ್, ಅಡುಗೆ ಮಾಡಿದವ ಸೇರಿದಂತೆ ಎಲ್ಲರ ಮೇಲೆ ಬಿತ್ತು ಕೇಸ್ : ಏನಿದು ಪ್ರಕರಣ? ಇಲ್ಲಿದೆ ಡೀಟೇಲ್ಸ್

ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ- ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 


ಈ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಹೇಮಂತ್ ಎಂಬುವವರ ಜೊತೆಗೆ ಮಂಡಗದ್ದೆಯಲ್ಲಿ ಮೀನು ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದರು ಎನ್ನಲಾಗಿದ್ದು 15ನೇ ಮೈಲಿಕಲ್ಲು ಸಮೀಪ ಖಾಸಗಿ ಬಸ್ ಎದುರಾದಾಗ ಸ್ಕೂಟಿಯಲ್ಲಿದ್ದ ಇಬ್ಬರೂ ಆತಂಕಗೊಂಡು ಬಸ್ ಮೈಮೇಲೆ ಬರಬಹುದು ಎಂಬ ಭಯದಲ್ಲಿ ಹೇಮಂತ್ ಬೈಕಿನಿಂದ ಹಾರಿದ್ದಾರೆ. ಈ ವೇಳೆ ಸ್ಕೂಟಿಯಲ್ಲಿದ್ದ ಗಿರೀಶ್ ಗೆ ಬಸ್ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಗಿರೀಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದು. ಅಪಘಾತದ ಸಂಬಂಧ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. 

ಕಳೆದ ಕೆಲ ದಿನಗಳ ಹಿಂದಷ್ಟೇ ಓಮಿನಿ ಕಾರು ಹಾಗೂ ಬೈಕ್ ನಡುವೆ ಮಾಳೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಪ್ಪ ಮೂಲದ ಶಿಕ್ಷಕ ವೆಂಕಟೇಶ್ ಅವರು ಮೃತಪಟ್ಟಿದ್ದರು.