ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಮನೆ ಕಳ್ಳತನ ಮಾಡಿ ಲಕ್ಷಾಂತರ ರೂಪಾಯಿಯ ಮೌಲ್ಯ ತಲೆ ಬಾಳುವ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದ ಖದೀಮನನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅರಳಿಕೊಪ್ಪ ಗ್ರಾಮದ ಒಂದು ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಬಾಳೆಹೊನ್ನೂರು ಪಿಎಸ್ಸೈ ಅವರ ನೇತೃತ್ವದ ಪೊಲೀಸರ ತಂಡ ಬಂಧಿಸಿ, ಆರೋಪಿಯು ಕಳ್ಳತನ ನಡೆಸಿದ್ದ 1.17 ಲಕ್ಷ ಮೌಲ್ಯದ 21.832 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿ ಸೆರೆ :
ಚಿಕ್ಕಮಗಳೂರು ನಗರದ ಸಂತೆ ಮಾರ್ಕೆಟ್ ನ ಲಾರಿ ಸ್ಟಾಂಡ್ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ಬಂದಿಸಿದ್ದಾರೆ.
ಈ ಕಾರ್ಯಾಚರಣೆಯನ್ನು CEN ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಪೊಲೀಸರ ತಂಡ ನಡೆಸಿದ್ದು ಆರೋಪಿಯಿಂದ 410 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತಾಗಿ ಎಚ್ಚರಿಕೆ ನೀಡಿರುವ ಪೊಲೀಸರು ಯಾರಾದರೂ ಅನುಮಾನಸ್ಪದ ವ್ಯಕ್ತಿಗಳು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡಲ್ಲಿ ಅಂತಹವರ ಕುರಿತಾಗಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.






0 Comments