ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು ತೂದೂರು ಸಮೀಪದ ಗಬಡಿ ರೈಸ್ ಮಿಲ್ ಎದುರು ಆಯತಪ್ಪಿ ಬೈಕ್ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ : ಹೋಂ ಸ್ಟೇ ಗೆ ಬರುವ ಜೋಡಿಗಳ ಖಾಸಗೀ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ನಾಲ್ವರು ಅಂದರ್
ಈ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯನ್ನು ನಳೀನ್ ಕೊಪ್ಪ ನಿವಾಸಿ ರವಿ ನಾಯ್ಕ ಎಂದು ಗುರುತಿಸಲಾಗಿದೆ. ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹೊಂಡಕ್ಕೆ ಬೈಕ್ ಸಮೇತ ಸವಾರ ಬಿದ್ದ ಪರಿಣಾಮ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಈ ಅಪಘಾತವು ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






0 Comments