ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳ ಹಿಂದೆ ಭಾರೀ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ತೆರಳಿದ್ದ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಹಮ್ಮಿಕೊಂಡಿದ್ದ ಕೊಡಗು ಚಲೋವನ್ನು ಮುಂದೂಡಲಾಗಿದೆ ಎಂದು ಸಿದ್ದರಾಮಯ್ಯ ಅವರೇ ತಿಳಿಸಿದರು.
ಕೊಡಗು ಚಲೋ ನಡೆಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅನುಮತಿಸದ ಹಿನ್ನೆಲೆ ಹಾಗೂ ಈ ದಿನಗಳಲ್ಲಿ ನಿಷೇದಾಜ್ಞೆ ಜಾರಿಮಾಡಿರುವುದರಿಂದ ಕಾಂಗ್ರೆಸ್ ನ ಕಾರ್ಯಕರ್ತರು, ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಕೊಡಗು ಚಲೋ ಪ್ರತಿಭಟನಾ ರ‍್ಯಾಲಿಯನ್ನು ಮುಂದೂಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ : ಬಿಜೆಪಿ ಮುಖಂಡನ ಮನೆಗೆ ಪಿಸ್ತೂಲ್ ಹಿಡಿದುಕೊಂಡು ನುಗ್ಗಿದ ದುಷ್ಕರ್ಮಿಗಳು
ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ತಿಳಿದೂ ಕೂಡ ಯಾವುದೇ ರೀತಿಯ ತಪ್ಪನ್ನು ಮಾಡುವುದಿಲ್ಲ, ವಿಧಿಸಿರುವ ಕಾನೂನು ಉಲ್ಲಂಘನೆ ಮಾಡದೆಯೇ ಮಡಿಕೇರಿ ಚಲೋ ಬೃಹತ್ ಪ್ರತಿಭಟನೆಯನ್ನು ಮುಂದೂಡುತ್ತೇವೆ ಎಂದರು.
ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಆದ ಮೇಲೆ ಬಿಜೆಪಿಯವರಿಗೆ ಹೊಟ್ಟೆ ಉರಿ ಶುರುವಾಗಿದೆ. ಅದಕ್ಕೆ ಅವರು ವೀರ ಸಾವರ್ಕರ್ ಹಾಗೂ ಗೋಡ್ಸೆಯನ್ನು ಎಲ್ಲಾ ವಿಚಾರಗಳಿಗೆ ಎಳೆದು ತರುತ್ತಿದ್ದಾರೆ ಜಿಲ್ಲಾಧಿಕಾರಿ ಅವರ ಆದೇಶ ಅಂದರೆ ಅದು ಸರ್ಕಾರದ ಆದೇಶ ಅದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಸುಖಾ ಸುಮ್ಮನೆ ಬಿಜೆಪಿ ವಿವಾದ ಹಾಗೂ ಗೊಂದಲ ಸೃಷ್ಟಿಸುತ್ತಿರುವುದನ್ನು ನಿಲ್ಲಿಸಬೇಕು ಎಂದರು.





.jpeg)

0 Comments