ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಂಧಿತನಾಗಿದ್ದ ಆರೋಪಿಗೆ ನ್ಯಾಯಾಲಯವು ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಇದನ್ನೂ ಓದಿ : ಮೂಡಿಗೆರೆ : ಅಕ್ರಮವಾಗಿ ಜೂಜಾಟದಲ್ಲಿ ಭಾಗಿಯಾಗಿದ್ದ 08 ಜನ ಸೆರೆ ; ನಗದು ವಶಕ್ಕೆ ಪಡೆದ ಪೊಲೀಸರು
ಶಿವಮೊಗ್ಗ ಜಿಲ್ಲೆಯ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 29-06-2021 ರಂದು ಸಂಜೆ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮಕ್ಸೂದ್ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದಾಗಿ ದೂರು ದಾಖಲಾಗಿತ್ತು. ಈ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಆ ಸಮಯದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ತೀರ್ಥಹಳ್ಳಿ ವೃತ್ತದ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಕೈಗೊಂಡು ಆರೋಪಿ ಮಕ್ಸೂದ್ ನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿವಾದ ಮಂಡಿಸಿದ್ದರು.
ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ ನ್ಯಾಯಾಲಯ FTSC–II (ಪೋಕ್ಸೋ) ಶಿವಮೊಗ್ಗದ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ಆರೋಪಿ ಮೊಹಮ್ಮದ್ ಮಕ್ಸೂದ್ ಎಂ.ಹೆಚ್ ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆ ಆರೋಪಿ ಮಕ್ಸೂದ್ ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000 ರೂ ದಂಡ ವಿಧಿಸಿದೆ ಆದೇಶಿಸಿದೆ. ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರಾಗೃಹ ವಾಸ ಶಿಕ್ಷೆ ನೀಡಿ ನ್ಯಾಯಾಲಯವು ಆದೇಶಿಸಿದೆ.






0 Comments