ಹಾಸನ : (ನ್ಯೂಸ್ ಮಲ್ನಾಡ್ ವರದಿ) ಆನೆ ದಾಳಿಯಿಂದ ಬೇಸತ್ತಿರುವ ಗ್ರಾಮಸ್ಥರು ಆಕ್ರೋಶಭರಿತರಾಗಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ಕೂಡಿ ಹಾಕಿ ತಮಗಿರುವ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬಾಳೆಹೊನ್ನೂರು : ಗ್ಯಾಸ್ ಕಟರ್ ನಿಂದ ಕಿಟಕಿಯ ರಾಡನ್ನು ತುಂಡರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಖದೀಮರು
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾರ್ವೆಪೇಟೆ ಗ್ರಾಮಸ್ಥರು ಬೆಳೆದ ಬೆಳೆಗಳು ಕಾಡಾನೆ ಹಾವಳಿಯಿಂದ ನಾಶವಾಗಿತ್ತು. ಇದನ್ನು ಪರಿಶೀಲನೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಪಿಡಿಓ ಘಟನಾ ಸ್ಥಳಕ್ಕೆ ಬಂದಿದ್ದರು. ಅವರನ್ನು ಕಂಡ ಗ್ರಾಮಸ್ಥರು ಕೂಡಲೇ ಅವರನ್ನು ಕೊಠಡಿಯಲ್ಲಿ ಕೂಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ.
ನಂತರ ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸಿ ತಮಗಿದ್ದ ವ್ಯಾಪಕ ಸಿಟ್ಟನ್ನು ಹೊರಹಾಕಿದ್ದಾರೆ. ನಾರ್ವೆಪೇಟೆ ಗ್ರಾಮ ಪಂಚಾಯ್ತಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಹಾಗೂ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಲೇ ಬೇಕೆಂದು ಆಗ್ರಹಿಸಿದ್ದಾರೆ.
ಕಾಫಿ ತೋಟದಲ್ಲಿ ದಿನನಿತ್ಯ ಕಾಡಾನೆಗಳು ಓಡಾಡುತ್ತಿದ್ದು, ಬಾಳೆ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. 20 ವರ್ಷಗಳಿಂದ ಬೆಳೆದಿದ್ದ ಕಾಫಿ ಗಿಡಗಳನ್ನು ಕಳೆದುಕೊಂಡು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಕುರಿತು ಸಂಬಂಧಿಸಿದವರು ಸೂಕ್ತವಾದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.






0 Comments