ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಮಡಿಕೇರಿಗೆ ಪ್ರವಾಸಕ್ಕೆ ಬಂದಿದ್ದ ತಂಡದ ಮೇಲೆ ಕೆಲ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಈ ಕುರಿತಾಗಿ ಹಲ್ಲೆಗೀಡಾದವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ವರದಿಯಾಗಿದೆ. 

ಇದನ್ನೂ ಓದಿ : ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ, ಬಿಜೆಪಿ ಕಾರ್ಯಕರ್ತರಿಂದ ತೀವ್ರ ಆಕ್ರೋಶ

ಮಡಿಕೇರಿಗೆ ಪ್ರವಾಸಕ್ಕೆ ಬಂದಿದ್ದ ನಂದಾ ಕಿಶನ್, ಸಮನ್ ಸಾಜಿದ್, ಶಂಶೀರ್ ಹಾಗೂ ಇಬ್ಬರು ಯುವತಿಯರು, ಓರ್ವ ಹಿಂದೂ ಯುವತಿ ಒಟ್ಟಿಗೆ ಒಂದೇ ಕಾರಿನಲ್ಲಿ ಮಡಿಕೇರಿಗೆ ಪೋಷಕರ ಅನುಮತಿ ಪಡೆದು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅನಾಮಿಕರು ಬಂದು ಸಮನ್, ಶಂಶೀರ್ ಮೇಲೆ ದಾಳಿ ನಡೆಸಿದ್ದಾರೆ. ಅನ್ಯಕೋಮಿನ ಯುವಕರು ಹಿಂದೂ ಯುವತಿಯೊಂದಿಗೆ ಒಂದೇ ಕಾರಿನಲ್ಲಿ ಬಂದ ಕಾರಣ ಅದನ್ನು ವಿರೋಧಿಸಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.


ಯುವತಿಯರ ಫೋಟೋಗಳನ್ನು ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು ನಿನ್ನೆ ಸಂಜೆಯ ವೇಳೆಗೆ ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಇದ್ದ ಇಬ್ಬರು ಹಿಂದೂ ಯುವತಿಯರು ಮಂಗಳೂರು ಕಡೆಯವರು ಎಂದು ಉಲ್ಲೇಖಿಸಲಾಗಿತ್ತು. ಈ ಬಗ್ಗೆ ನಂದಾ ಕಿಶನ್ ಅವರು ಅನಾಮಿಕ ದುಷ್ಕರ್ಮಿಗಳ ವಿರುದ್ಧ ಪೊಲೀಸ್ ದೂರು ನೀಡಿದ್ದು ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೋಲಿಸರು‌ ತನಿಖೆ ನಡೆಸುತ್ತಿದ್ದಾರೆ.