ಕಳೆದ ಕೆಲವು ವರ್ಷಗಳಿಂದ ಮಾರಕವಾದ ಬೋನ್ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದ ಕಾರ್ತಿಕ್ ಚೆಟ್ಟಿಯಾರ್ ಚಿಕಿತ್ಸೆಗೆ ಒಳಪಟ್ಟಿದ್ದರು. ಆದರೆ ಕ್ಯಾನ್ಸರ್ ಉಲ್ಬಣಿಸಿ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮವನ್ನು ಬೀರಿದ ಕಾರಣ ಕಾರ್ತಿಕ್ ಜಿ ಚೆಟ್ಟಿಯಾರ್ ಅವರು ಇಂದು ನಿಧನರಾಗಿದ್ದಾರೆ.
ಕಾಂಗ್ರೆಸ್ ಹಲವು ಹೋರಾಟಗಳಲ್ಲಿ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಿದ್ದ ಅವರು ಬಡವರ್ಗದ ಅನೇಕರ ಉನ್ನತಿಗಾಗಿ ಶ್ರಮಿಸಿದ್ದರು. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಕಳೆದುಕೊಂಡಿರುವ ಕುಟುಂಬ ವರ್ಗ, ಆತ್ಮೀಯರು, ಸ್ನೇಹಿತರು ಅತೀವವಾದ ನೋವನ್ನು ವ್ಯಕ್ತಪಡಿಸಿದ್ದು. ವಿವಿಧ ಪಕ್ಷಗಳ ಕಾರ್ಯಕರ್ತರು, ಕಾಂಗ್ರೆಸ್ ನ ಮುಖಂಡರು ಸಂತಾಪ ಸೂಚಿಸಿದ್ದಾರೆ.






0 Comments