ಹಾಸನ : (ನ್ಯೂಸ್ ಮಲ್ನಾಡ್ ವರದಿ) ರಂಗೋಲಿ ಹಾಕುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಖದೀಮರು ಸರವನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಅಕ್ರಮ ಗೋಮಾಂಸದ ಅಡ್ಡೆ ಮೇಲೆ ದಾಳಿ ; ಖಡಕ್ ಕ್ರಮ ಕೈಗೊಂಡ ನಗರಸಭೆ
ಹಾಸನದ ಹೊಳೆ ನರಸೀಪುರದ ಅಕ್ಕಿಕುರುಬರ ಬೀದಿಯ ನಿವಾಸಿ ಸರಸ್ವತಿ ಎಂಬುವವರು ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ವೇಳೆಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಕಳ್ಳರು ಪರಾರಿಯಾಗಿದ್ದಾರೆ. ನಿನ್ನೆ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಹೆಲ್ಮೆಟ್ ಧರಿಸಿಕೊಂಡು ಬಂದ ಖದೀಮ ಅತ್ತಿತ್ತ ತಿರುಗಾಡಿ ಕೆಲಹೊತ್ತು ಹೊಂಚುಹಾಕಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಮೊದಲೇ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆತನನ್ನು ಗಮನಿಸಿದ ಸರಸ್ವತಿ ತಮ್ಮ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಈ ಸಂದರ್ಭವನ್ನು ಕಾದು ಏಕಾಏಕಿ ಹಿಂದೆಯಿಂದ ಬಂದ ಖದೀಮ ಮಹಿಳೆ ಸರಸ್ವತಿ ಅವರ ಕುತ್ತಿಗೆಗೆ ಕೈಹಾಕಿ ಚಿನ್ನದ ಸರ ಕೀಳಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದರೂ ಬಿಡದೇ, ಮಹಿಳೆ ಕಿರುಚಿದ ಕಾರಣಕ್ಕಾಗಿ ರಂಗೋಲಿಯನ್ನು ಆಕೆಯ ಮುಖದ ಮೇಲೆ ಎರಚಿ 40 ಗ್ರಾಂ ನ ಬಂಗಾರದ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಎಸ್ಕೇಪ್ ಆಗಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ಕಳ್ಳ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಆತನ ಪತ್ತೆಗಾಗಿ ಬಲೆಬೀಸಿದ್ದಾರೆ. ಘಟನಾ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪರಿಚಿತ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

.jpeg)




0 Comments