ಶೃಂಗೇರಿ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಬಿ.ಎಸ್ ಸೇರಿದಂತೆ ಚಿಕ್ಕಮಗಳೂರು ಹಾಸನ ಕೊಡಗು ಜಿಲ್ಲೆಗಳ ವಿವಿಧ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಬಿ.ಎಸ್ ಅವರು ಶೃಂಗೇರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂತೆಯೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವೃತ್ತದ ಸೋಮಶೇಖರ್ ಜೆ.ಸಿ ಅವರು ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆಗೆವರ್ಗವಾಗಿದ್ದಾರೆ. 


ಹಾಸನದ ಅರಸೀಕೆರೆ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ವಸಂತ್ ಕೆ.ಎಂ ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ವರ್ಗಗೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ವೃತ ನಿರೀಕ್ಷಕರಾದ ವೆಂಕಟೇಶ್ ಪಿ.ವಿ ಅವರು DCRE ದಾವಣಗೆರೆ ಇಲ್ಲಿಗೆ ವರ್ಗಗೊಂಡಿದ್ದಾರೆ. ರಘುಪತಿ ಎಸ್.ಎಂ ಅವರು ಹಾಸನ ಜಿಲ್ಲೆಯ ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ರಮಣ್ಯ ಜಿಕೆ ಇವರು ಹಾಸನ ಜಿಲ್ಲೆಯ DSB ಆಗಿ ವರ್ಗಾವಣೆಗೊಂಡಿದ್ದಾರೆ.

ಸಿವಿಲ್ ವಿಭಾಗದ DYSP ಹಾಸನ ಜಿಲ್ಲೆಯ ಸಕಲೇಶಪುರ ಉಪವಿಭಾಗದ ಅನಿಲ್ ಕುಮಾರ್ H.R ಅವರನ್ನು ಚಿತ್ರದುರ್ಗ ಉಪವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.