ಚಿಕ್ಕಮಗಳೂರು :
ನಾಯಿ ಹಾವಳಿ ನಿಯಂತ್ರಣದ ಸಲುವಾಗಿ ರೇಬೀಸ್ ಇಂಜೆಕ್ಷನ್ :
ಶೃಂಗೇರಿ ಪಟ್ಟಣದ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಹೆಚ್ಚಿರುವ ಹುಚ್ಚು ನಾಯಿ ಹಾವಳಿ ನಿಯಂತ್ರಿಸುವ ಸಲುವಾಗಿ ಹಾಗೂ ಬೀದಿ ನಾಯಿಗಳಿಗೆ ರೇಬೀಸ್ ಇಂಜೆಕ್ಷನ್ ನೀಡುವ ಮೂಲಕ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾಗಬಾರದೆಂಬ ಉದ್ದೇಶದಿಂದ ಇಂದು ಶೃಂಗೇರಿ ಪಟ್ಟಣ ಪಂಚಾಯತ್ ನ ಅಧಿಕಾರಿ ಸಿಬ್ಬಂದಿ ವರ್ಗ, ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯ ವೃಂದ ಪಟ್ಟಣದ ವ್ಯಾಪ್ತಿಯ ನಾಯಿಗಳಿಗೆ ಚುಚ್ಚುಮದ್ದು ನೀಡುವಲ್ಲಿ ಸಹಕರಿಸಿದರು.
ಚಿಕ್ಕಮಗಳೂರು ಜಿಲ್ಲಾ ಉಪವಿಭಾಗಾಧಿಕಾರಿಯಾಗಿ ರಾಜೇಶ್ H.D ನೇಮಕ :
ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಡಾ. H.L ನಾಗರಾಜ್ ಅವರು ವರ್ಗಾವಣೆಯ ಬಳಿಕ ಅವರಿಂದ ತೆರವಾದ ಸ್ಥಾನಕ್ಕೆ ಇನ್ನೋರ್ವ ಅಧಿಕಾರಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ ಚಿಕ್ಕಮಗಳೂರು ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ, ಜನರಿಗೆ ಅತ್ಯಂತ ಹತ್ತಿರವಾಗಿದ್ದ ಹಿರಿಯ ಉಪ ವಿಭಾಗಾಧಿಕಾರಿ ಡಾ. H.L ನಾಗರಾಜ್ ಅವರು ಜಿಲ್ಲೆಯಿಂದ ಮುಂಬಡ್ತಿಗೊಂಡು ಮಂಡ್ಯದ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ತಿಕ್ಕೋಟು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ರಾಜೇಶ ಹೆಚ್.ಡಿ ಇವರನ್ನು ನೇಮಕಮಾಡಿ ಸರ್ಕಾರ ಆದೇಶಿಸಿದೆ.
ಮುಂಬರುವ ಚುನಾವಣೆಯಲ್ಲಿ ಚಿಕ್ಕಮಗಳೂರಿನಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯಗೆ ಕಿಸಾನ್ ಕಾಂಗ್ರೆಸ್ ಮನವಿ :
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಮನವಿ ಸಲ್ಲಿಸಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದ್ದು ಕ್ಷೇತ್ರದಲ್ಲಿ ಅವರ ವರ್ತನೆಯಿಂದ ಎಲ್ಲರೂ ಬೇಸತ್ತಿದ್ದಾರೆ. ದಿ. ಇಂದಿರಾಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದಂತಹ ಕ್ಷೇತ್ರದಿಂದ ನಿಮ್ಮಂತಹ ಜನನಾಯಕರು ಸ್ಪರ್ಧಿಸಿದರೆ ಮತ್ತೊಮ್ಮೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪುನರ್ಜನ್ಮವಾಗಲಿದೆ. ಈ ಕಾರಣದಿಂದ ತಮ್ಮ ಜನಮದಿನದ ಸಂದರ್ಭದ ಈ ವೇದಿಕೆಯಲ್ಲಿ ಮನವಿ ಪುರಸ್ಕರಿಸುವಂತೆ ಕೋರುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ :
ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶವಾದ ಕೊಡಗಿನ ಗಡಿ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು ದೊಡ್ಡ ದೊಡ್ಡ ಅವಾಂತರಗಳನ್ನು ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೃಷ್ಟಿಸಿದೆ. ಮಳೆಯು ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆ ಸುರಿಯುವ ಮುನ್ಸೂಚನೆಗಳಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 04 ಹಾಗೂ 05 ರ ಎರಡು ದಿನಗಳ ಕಾಲ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು ಈ ಭಾಗದಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ದೈನಂದಿನ ಚಟುವಟಿಕೆಗಳಲ್ಲಿ ತೊಡಗುವಂತೆ ಕೃಷಿಕರಿಗೆ ತಿಳಿಸಲಾಗಿದ್ದು, ನದಿಗಳ ನೀರಿನ ಮಟ್ಟದ ಅಬ್ಬರ ಹೆಚ್ಚಿರುವುದರಿಂದ ಹಾಗೂ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಶಿವಮೊಗ್ಗ :
ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ :
ನಗರದಲ್ಲಿ ಭಾರಿ ಮಳೆ ಸುರಿದ ಕಾರಣ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡಿದ್ದಾರೆ. ಮತ್ತೊಂದೆಡೆ ರಸ್ತೆಗಳೆಲ್ಲ ಕೆರೆಯಂತಾಗಿ ವಾಹನ ಸವಾರರು ಕಂಗಾಲಾಗಿದ್ದಾರೆ. ಶಿವಮೊಗ್ಗದ ಬೈಪಾಸ್ ರಸ್ತೆ, ಊರುಗಡೂರು, ಸೂಳೆಬೈಲು ಸುತ್ತಮುತ್ತ ವರುಣ ಅಬ್ಬರಿಸಿದ್ದಾನೆ. ಸುರಿದ ಮಳೆಯ ತೀವ್ರತೆಗೆ ಚರಂಡಿ ನೀರು ರಸ್ತೆಯ ಮೇಲೆಯೇ ಹರಿದು ಅಂಗಡಿ ಮುಂಗಟ್ಟುಗಳು, ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಭಾಗಶಃ ಜಲಾವೃತಗೊಂಡಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಮಲೆನಾಡಿಗರು ತತ್ತರಿಸಿದ್ದು ಜನರು ಮುಂದೇನೋ ಎಂಬ ಆತಂಕದಿಂದರುವಂತಾಗಿದೆ.
ಟವರ್ ನಿರ್ಮಿಸುವಂತೆ ಮನವಿ :
ಶಿವಮೊಗ್ಗ ಜಿಲ್ಲೆಯಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವ ಗ್ರಾಮಗಳಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದರು. ದೆಹಲಿಯಲ್ಲಿ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್‌ರನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿದ್ದು ಗುಡ್ಡಗಾಡು ಹಾಗೂ ಗ್ರಾಮೀಣ ಭಾಗಗಳ ವಿಧ್ಯಾರ್ಥಿಗಳಿಗೆ, ತುರ್ತು ಸಮಯದಲ್ಲಿ ಸಂಪರ್ಕ ಸಾಧಿಸುವ ಅವಶ್ಯಕತೆಯಿರುವ ಜನರಿಗೆ ಸಮರ್ಪಕವಾಗಿ ನೆಟ್ವರ್ಕ್ ಲಭಿಸದೆ ಉಂಟಾಗುತ್ತಿರುವ ಅನಾನುಕೂಲತೆಗೆಳ ಕುರಿತು ತಿಳಿಸಿದರು. ಹಾಗೂ ವ್ಯವಸ್ಥೆ ಕಲ್ಪಿಸುವಂತೆ ಕೋರಿದರು.
ಕೊಡಗು :
ವ್ಯಾಪಕ ಮಳೆಗೆ ಕುಸಿದ ರಸ್ತೆ; ಮಡಿಕೇರಿ- ಮಂಗಳೂರು ಸಂಪರ್ಕ ಕಡಿತ
ಕೊಡಗು ಜಿಲ್ಲೆಯಲ್ಲಿ ಭಾರೀಯ ಮಳೆಗೆ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದೆ. ಸೇತುವೆಯ ಕೆಳಭಾಗದಲ್ಲಿ ಪ್ರವಾಹದಿಂದ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದ್ದು, ಸೇತುವೆ ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಸಾಧ್ಯತೆ ಇದ್ದು, ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಸಹ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಅಕ್ರಮ ಗೋಮಾಂಸ ಸಾಗಾಣಿಕೆ; ಅಸ್ಸಾಂ ಮೂಲದ ಕಾರ್ಮಿಕರ ಬಂಧನ
ಮಡಿಕೇರಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರಿಬ್ಬರನ್ನು ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇಬ್ಬರು ಕಾರ್ಮಿಕರು ಗೋಮಾಂಸವನ್ನು ಚೀಲಗಳಲ್ಲಿ ತುಂಬಿಕೊಂಡು ಕಾರುಗುಂದದ ಮೂಲಕ ಸಾಗಾಟ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದರು.ಸ್ಥಳಕ್ಕೆ ಬಂದ ಪೊಲೀಸರು ಗೋಮಾಂಸ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದರು. ಗೋಮಾಂಸವನ್ನು ಸುಂಟಿಕೊಪ್ಪಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯ್ದೆ ಎಂಬುದು ಹರಿದ ಲಂಗೋಟಿಯಂತೆ ಆಗಿದೆ. ಇತ್ತೀಚಿನ ದಿನದಲ್ಲಿ ಅಕ್ರಮ ಗೋಸಾಗಾಟ, ಗೋಮಾಂಸ ಸಾಗಾಟ ಪ್ರಕರಣ ಬೆಳಕಿಗೆ ಬರಿತ್ತಿದ್ದರು ಪೊಲೀಸ್ ಇಲಾಖೆ ಯಾಕೋ ಎಚ್ಚೆಂತಂತೆ ಕಾಣುತ್ತಿಲ್ಲ ಎಂದು ಸ್ಥಳೀಯ ಹಿಂದೂ ಪರ ಸಂಘಟನೆ ಅಕ್ರೋಶ ಹೊರಹಾಕಿದ್ದಾರೆ.
ವ್ಯಾಪಕ ಮಳೆಗೆ ಕುಸಿದ ರಸ್ತೆ; ಮಡಿಕೇರಿ- ಮಂಗಳೂರು ಸಂಪರ್ಕ ಕಡಿತ
ಕೊಡಗು ಜಿಲ್ಲೆಯಲ್ಲಿ ಭಾರೀಯ ಮಳೆಗೆ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದೆ. ಸೇತುವೆಯ ಕೆಳಭಾಗದಲ್ಲಿ ಪ್ರವಾಹದಿಂದ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದ್ದು, ಸೇತುವೆ ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಸಾಧ್ಯತೆ ಇದ್ದು, ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಸಹ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಹಾಸನ :
ಶಿರಾಡಿ ಘಾಟ್ ರೀ-ಓಪನ್; ಬಸ್ ಓಡಾಡಲು ಅವಕಾಶ
ಸಕಲೇಶಪುರ: ದೋಣಿಗಾಲ್ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ಖಾಸಗಿ ಮತ್ತು ಸಾರ್ವಜನಿಕ ಬಸ್‌ಗಳಿಗೆ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.ಈ ಕುರಿತು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರಕಟಣೆ ಹೊರಡಿಸಿದ್ದಾರೆ. ದೋಣಿಗಾಲ್ ಸಮೀಪ ಭೂ ಕುಸಿತದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ 6ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.


0 Comments