ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಉರುಳಿರುವ ಘಟನೆ ಸಂಭವಿಸಿದೆ. 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹೊರವಲಯದ ದುರ್ಗಾದೇವಸ್ಥಾನದ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು ಲಾರಿಯು ಚಾಲಕನ ನಿಯಂತ್ರಣ ಕಳೆದುಕೊಂಡು ಉರುಳಿದೆ. 


ವಾಹನ ಓಡಿಸುತ್ತಿದ್ದ ಚಾಲಕನಿಗೆ ಬ್ರೇಕ್ ಸಿಗದ ಪರಿಣಾಮ ಸೂಕ್ತ ಸಮಯದಲ್ಲಿ ವಾಹನವನ್ನು ನಿಯಂತ್ರಣಕ್ಕೆ ತರಲಾಗದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಲಾರಿಯಲ್ಲಿದ್ದ ಜಲ್ಲಿಕಲ್ಲು ನೆಲಸಮವಾಗಿದೆ. ಲಾರಿ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಯಾವುದೇ ವಾಹನಗಳು ಅಡ್ಡಬಾರದ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.