ಕೊಡಗು : (ನ್ಯೂಸ್ ಮಲ್ನಾಡ್ ವರದಿ) ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮರಬಿದ್ದು ಕಾರ್ಮಿಕ ಸಾವನ್ನಪ್ಪಿರುವ ದುರ್ಘಟನೆ ಕೊಡಗಿನಲ್ಲಿ ಸಂಭವಿಸಿದೆ.
ಕೊಡಗು ಜಿಲ್ಲೆಯ ಅಮ್ಮತ್ತಿ ಹೊಸಕೋಟೆಯ ಹಿಲ್ ಸೈಡ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮರ ಬಿದ್ದ ಪರಿಣಾಮ ಕಾರ್ಮಿಕ ಪ್ರಕಾಶ್ ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತ ಕಾರ್ಮಿಕ ಪ್ರಕಾಶ್ ಅವರು ಕಕ್ಕಟ್ ಕಾಡು ನಿವಾಸಿಯಾಗಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಇನ್ನೋರ್ವ ಕಾರ್ಮಿಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮೃತರನ್ನು ಕಳೆದುಕೊಂಡಿರುವ ಕುಟುಂಬವರ್ಗದವರು ಅತೀವವಾದ ದುಃಖವನ್ನು ವ್ಯಕ್ತಪಡಿಸಿದ್ದಾರೆ.
ಒಂದೆಡೆ ಕೊಡಗು ಭಾಗದಲ್ಲಿ ಸುರಿದ ಭಾರೀ ಮಳೆಯು ಜನರನ್ನು ನಲುಗಿಸಿದ್ದರೆ, ಇನ್ನೊಂದೆಡೆ ಆನೆದಾಳಿಯಿಂದ ಭಾರೀ ಪ್ರಮಾಣದ ಬೆಳೆ ನಾಶ ಸಂಭವಿಸುತ್ತಿದ್ದು ರೈತರ ಸ್ಥಿತಿ ಅತ್ಯಂತ ಕ್ಲಿಷ್ಟಕರವಾಗಿದೆ.






0 Comments