ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಅರಣ್ಯ ಇಲಾಖೆ ಅಧಿಕಾರಿವರ್ಗ ಹಾಗೂ ಸಿಬ್ಬಂದಿಗಳು ನಡೆಸಿದ ಸತತ 10 ದಿನಗಳ ಕಾರ್ಯಾಚರಣೆಗೆ ಕೊನೆಗೂ ಯಶಸ್ಸು ದೊರೆತಿದ್ದು, ಜಾನುವಾರುಗಳನ್ನು ಕೊಂದು ಹಾಕುತ್ತಿದ್ದ ಹುಲಿಯನ್ನು ಸೆರೆಹಿಡಿದಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಕಾರ್ಯಾಚರಣೆಯ ಮೂಲಕ ಕೊನೆಗೂ ನಿನ್ನೆ ಹುಲಿಯನ್ನು ಸೆರೆಹಿಡಿಯಲಾಗಿದೆ.
ಇದನ್ನೂ ಓದಿ: ಬಾಳೆಹೊನ್ನೂರು: ‘ನಿಮ್ಮನ್ನು ಸಾಯಿಸದೇ ಬಿಡುವುದಿಲ್ಲ’ ಪೊಲೀಸ್ ಗಾಡಿಯನ್ನೇ ಅಡ್ಡಗಟ್ಟಿ ಹಲ್ಲೆಗೈದ ಕಿಡಿಗೇಡಿಗಳು
ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಭೀತಿ ಉಂಟುಮಾಡಿದ್ದ ಹುಲಿಯ ಸೆರೆಗೆ 10 ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು.
ನಾಲ್ಕು ಆನೆಗಳನ್ನು ಸಹ ಈ ಕಾರ್ಯಾಚರಣೆಗೆ ಬಳಸಿಕೊಂಡು ಅರವಳಿಕೆ ಮದ್ದು ನೀಡುವ ಮೂಲಕ ಹುಲಿಯನ್ನು ಮಾಲ್ದಾರೆಯಲ್ಲಿ ಸೆರೆ ಹಿಡಿಯಲಾಗಿದೆ.
ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದರಿಂದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ವೇಳೆ ವಾಹನ ಸಂಚಾರ ನಿಷೇಧಿಸಲಾಗಿತ್ತು. ಈಗ ಹುಲಿ ಸೆರೆಯಾಗಿರುವುದರಿಂದ ಸ್ಥಳೀಯರಲ್ಲಿದ್ದ ಭೀತಿ ಕಡಿಮೆಯಾಗಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿವರ್ಗ ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕರು ಧನ್ಯವಾದಗಳನ್ನು ತಿಳಿಸಿದರು.





0 Comments